ಸುದ್ದಿಒನ್ ವೆಬ್ ಡೆಸ್ಕ್
ಸೋಮವಾರ ಮಧ್ಯಾಹ್ನ ಇಂಡೋನೇಷ್ಯಾದ ಪ್ರಮುಖ ದ್ವೀಪ ಜಾವಾದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ. ಕೆಲವು ಸೆಕೆಂಡುಗಳ ಕಾಲ ಸಂಭವಿಸಿದ ಈ ಭೂಕಂಪದಿಂದ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕಟ್ಟಡಗಳು ಕುಸಿದು ಬಿದ್ದಿದ್ದರಿಂದ ಕೆಲವರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ” ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮುಖ್ಯಸ್ಥ ಸುಹರ್ಯಾಂತೋ ಹೇಳಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.
ಭೂಕಂಪವು ರಾಜಧಾನಿ ಜಕಾರ್ತಾದಿಂದ ಆಗ್ನೇಯಕ್ಕೆ 75 ಕಿಮೀ ದೂರದಲ್ಲಿರುವ ಸಿಯಾಂಜೂರ್‌ನಲ್ಲಿ ಸಂಭವಿಸಿದೆ. ಮತ್ತು
ಸುನಾಮಿ ಸಂಭವಿಸುವ ಸಾಧ್ಯತೆಯಿಲ್ಲ
ಎಂದು ಹವಾಮಾನ ಮತ್ತು ಭೂಭೌತಶಾಸ್ತ್ರ ಸಂಸ್ಥೆ (ಬಿಎಂಕೆಜಿ) ತಿಳಿಸಿದೆ.