ಕೆಎಲ್ ರಾಹುಲ್ ಮತ್ತು ಆಥಿಯಾ ಶೆಟ್ಟಿ ಮದುವೆ ದಿನಾಂಕ ಫಿಕ್ಸ್ : ಡಿಟೈಲ್ ಇಲ್ಲಿದೆ

ಮುಂಬೈ: ಐಪಿಎಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಭಾರತೀಯ ರಾಷ್ಟ್ರೀಯ ತಂಡದ ಉಪನಾಯಕ ಕೆಎಲ್ ರಾಹುಲ್ ಅವರೊಂದಿಗೆ ಮೂರು ವರ್ಷಗಳಿಂದ ಡೇಟಿಂಗ್ ನಡೆಸುತ್ತಿರುವ ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಮದುವೆ ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ವಿವಾಹವಾಗಲಿದ್ದಾರೆ ಎನ್ನಲಾಗಿದೆ.

ಅಥಿಯಾ ಅವರ ಆಪ್ತ ಮೂಲಗಳು ಇಂಡಿಯಾ ಟುಡೇಗೆ ಮಾಹಿತಿ ಬಹಿರಂಗಪಡಿಸಿವೆ ಎನ್ನಲಾಗಿದೆ. ಈಗಾಗಲೇ ವಿವಾಹದ ಸಿದ್ಧತೆಗಳು ಭರದಿಂದ ಸಾಗುತ್ತಿವೆ ಮತ್ತು ರಾಹುಲ್ ಅವರ ಪೋಷಕರು ಇತ್ತೀಚೆಗೆ ಅಥಿಯಾ ಅವರ ಕುಟುಂಬವನ್ನು ಭೇಟಿ ಮಾಡಲು ಮುಂಬೈಗೆ ಬಂದಿದ್ದರು ಎನ್ನಲಾಗಿದೆ.

 

ಮದುವೆ, ಅದರ ಪ್ರತಿಯೊಂದು ಕೆಲಸಗಳನ್ನು ಸ್ವತಃ ವಧುವಿನ ಕಡೆಯವರು ನೋಡಿಕೊಳ್ಳುತ್ತಿದ್ದಾರೆ. ಮದುವೆ ಮುಂಬೈನಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಅಥಿಯಾ ಇತ್ತೀಚೆಗೆ ಕೆಎಲ್ ರಾಹುಲ್ ಅವರೊಂದಿಗೆ ಚಿಕಿತ್ಸೆಗಾಗಿ ಜರ್ಮನಿಗೆ ತೆರಳಿದ್ದರು. ಗಾಯದ ಸಮಸ್ಯೆಯಿಂದಾಗಿ ಕ್ರಿಕೆಟಿಗ ಭಾರತದ ಇಂಗ್ಲೆಂಡ್ ಪ್ರವಾಸದಿಂದ ಹೊರಗುಳಿದಿದ್ದರು. ತೊಡೆಸಂದು ಗಾಯಕ್ಕೆ ಒಳಗಾದ 30 ವರ್ಷ ರಾಹುಲ್ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ರಾಹುಲ್ ಸುಮಾರು ಒಂದು ತಿಂಗಳ ಕಾಲ ಅಲ್ಲಿಯೇ ಇರುತ್ತಾರೆ ಮತ್ತು ಅಥಿಯಾ ಅವರು ಚೇತರಿಸಿಕೊಳ್ಳುವ ಸಮಯದಲ್ಲಿ ಅವರ ಜೊತೆಯಲ್ಲಿಯೇ ಇರುತ್ತಾರೆ ಎಂದು ಮೂಲವು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *