ಚಿತ್ರದುರ್ಗ ಜಿಲ್ಲಾ ಹ್ಯಾಂಡ್‍ಬಾಲ್ ಸಂಸ್ಥೆಯ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸಿದ್ದಾರೆ : ಕೆ.ಹೆಚ್. ಶಿವರಾಮು

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 6 : ಹ್ಯಾಂಡ್‍ಬಾಲ್ ಕ್ರೀಡೆಯಲ್ಲಿ ನಮ್ಮ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯನ್ನು ನೋಡುವಂತೆ ಆಟವನ್ನು ಆಡಿದ್ದಾರೆ. ಹಲವಾರು ರಾಷ್ಟ್ರ ಮತ್ತು ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿದ ಕೀರ್ತಿ ನಮ್ಮ ಕ್ರೀಡಾಪಟುಗಳಿಗೆ ಇದೆ ಎಂದು ಚಿತ್ರದುರ್ಗ ಜಿಲ್ಲಾ ಹ್ಯಾಂಡ್‍ಬಾಲ್ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಕೆ.ಹೆಚ್. ಶಿವರಾಮು ತಿಳಿಸಿದ್ದಾರೆ.

ಜನವರಿ 09 ರಿಂದ ಜನವರಿ 13ರವರೆಗೆ ರಾಜಸ್ಥಾನದ ಕರೋಲಿಯಲ್ಲಿ ನಡೆಯುವ 20 ವರ್ಷದೊಳಗಿನ ಬಾಲಕರ ವಿಭಾಗದ 46ನೇ ರಾಷ್ಟ್ರೀಯ ಹ್ಯಾಂಡ್‍ಬಾಲ್‍ನಲ್ಲಿ ಭಾಗವಹಿಸುತ್ತಿರುವ ಚಿತ್ರದುರ್ಗದ ಜಿಲ್ಲಾ ಹ್ಯಾಂಡ್‍ಬಾಲ್ ಸಂಸ್ಥೆಯ ಕ್ರೀಡಾಪಟುಗಳಿಗೆ ನಗರದ ವಿ.ಪಿ.ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಮತ್ತು ಬೀಳ್ಕೂಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಚಿತ್ರದುರ್ಗ ನಗರದಲ್ಲಿ ಕಳೆದ 23 ವರ್ಷಗಳ ಹಿಂದೆ ಹಲವಾರು ಕ್ರೀಡೆಗಳು ನಡೆಯುತ್ತಿದ್ದ ಸಮಯದಲ್ಲಿ ಹ್ಯಾಂಡ್ ಬಾಲ್‍ನ್ನು ಪ್ರಾರಂಭ ಮಾಡಲಾಯಿತು. ಅಲ್ಲಿಂದ ಇಲ್ಲಿಯವರೆಗೂ ನಮ್ಮ ಸಂಸ್ಥೆಯ ಹಲವಾರು ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸಿದ್ದಾರೆ. ಇದರಲ್ಲಿ ಹಲವಾರು ಕ್ರೀಡಾಪಟುಗಳು ನೇರವಾಗಿ ಸರ್ಕಾರಿ ಉದ್ಯೋಗವನ್ನು ಪಡೆದಿದ್ದಾರೆ. 450ಕ್ಕೂ ಹೆಚ್ಚು ಕ್ರೀಡಾಪಟುಗಳು ಹಲವಾರು ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಾರೆ. ಇದರಲ್ಲಿ 50ಕ್ಕೂ ಹೆಚ್ಚು ಜನ ವೈದ್ಯಕೀಯ ಕೋರ್ಸ ಪ್ರವೇಶವನ್ನು ಪಡೆದಿದ್ದಾರೆ. 60ಕ್ಕೂ ಹೆಚ್ಚು ಕ್ರೀಡಾಪಟುಗಳು ಸರ್ಕಾರದ ತಲಾ 1 ಲಕ್ಷ ರೂಗಳ ಸಹಾಯಧನವನ್ನು ಪಡೆದಿದ್ದಾರೆ ಎಂದರು.

ಚಿತ್ರದುರ್ಗ ಜಿಲ್ಲಾ ಹ್ಯಾಂಡ್‍ಬಾಲ್ ಸಂಸ್ಥೆ ತನ್ನ 23 ವರ್ಷದಲ್ಲಿ ಹಲವಾರು ಕ್ರೀಡಾಪಟುಗಳನ್ನು ಹುಟ್ಟು ಹಾಕುವುದರ ಮೂಲಕ ಬಡ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಯೂ ಸಹಾ ಅಗತ್ಯ ಎಂದು ತೋರಿಸಿಕೊಟ್ಟಿದೆ. ಮಕ್ಕಳಲ್ಲಿ ಪ್ರತಿಭೆ ಇರುತ್ತದೆ ಅದನ್ನು ಗುರುತಿಸುವ ಕಾರ್ಯವನ್ನು ಶಿಕ್ಷಕರುಗಳಾದ ನಾವುಗಳು ಮಾಡಬೇಕಿದೆ ಆಗ ಮಾತ್ರ ಪ್ರತಿಭೆ ಬೆಳಕಿಗೆ ಬರಲು ಸಾಧ್ಯವಿದೆ ಎಂದು ಶಿವರಾಂ ತಿಳಿಸಿದರು.

ಸಂಸ್ಥೆಯ ಉಪಾಧ್ಯಕ್ಷರು. ಎಂ.ಹೆಚ್.ಜಯಣ್ಣ ಮಾತನಾಡಿ, ಇಂದಿನ ಕಾರ್ಯಕ್ರಮ ವಿದ್ಯಾರ್ಥಿಗಳಾದ ಕ್ರೀಡಾಪಟುಗಳಿಗೆ ಪ್ರೋತ್ಸಹ ನೀಡುವಂತ ಕಾರ್ಯಕ್ರಮವಾಗಿದೆ. ಮಕ್ಕಳಿಗೆ ಇಂತಹ ಶಿಕ್ಷಕರು ಸಿಗುವುದು ಸಹಾ ಕಷ್ಟವಾಗುತ್ತದೆ. ಇಲ್ಲಿನ ಶಿಕ್ಷಕರು ಮಕ್ಕಳ ಶ್ರಯೋಲಾಭೀಲಾಷೆಯನ್ನು ಬಯಸುವವರಾಗಿದ್ದಾರೆ. ಮಕ್ಕಳ ಕಷ್ಟದಲ್ಲಿಯೂ ಸಹಾ ಶಿಕ್ಷಕರು ಭಾಗಿಯಾಗುವುದರ ಮೂಲಕ ಪರಿಹಾರವನ್ನು ಕಂಡುಕೊಡಲಿದ್ದಾರೆ ಎಂದರು.

ಸಂಸ್ಥೆಯ ಖಜಾಂಚಿ ಸಿ.ಎಸ್.ಪ್ರೇಮಾನಂದ್ ಮಾತನಾಡಿ, ಚಿತ್ರದುರ್ಗದಲ್ಲಿ ಹ್ಯಾಂಡ್‍ಬಾಲ್ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ನ್ಯಾಷನಲ್ ಕ್ರೀಡಾಕೂಟವನ್ನು ನಡೆಸಲಾಯಿತು. ಹಲವಾರು ತರಬೇತಿ ತಂಡಗಳು ಮಕ್ಕಳಿಂದ ಹಣವನ್ನು ಪಡೆಯುತ್ತಾರೆ, ಆದರೆ ಶಿವರಾಂರವರು ಮಕ್ಕಳಿಂದ ಯಾವುದೇ ರೀತಿಯ ಹಣವನ್ನು ಪಡೆಯದೆ ತಾವೇ ಸ್ವತ ಹಣವನ್ನು ಹಾಕುವುದರ ಮೂಲಕ ಮಕ್ಕಳನ್ನು ತರಬೇತಿ ನೀಡುತ್ತಿದ್ದಾರೆ. ಅಲ್ಲದೆ ಮಕ್ಕಳ ಬಗ್ಗೆ ಕಾಳಜಿಯನ್ನು ಸಹಾ ವಹಿಸುತ್ತಾರೆ. ಇಲ್ಲಿ ತರಬೇತಿಯನ್ನು ಪಡೆದ ಹಲವಾರು ಮಕ್ಕಳು ಉನ್ನತವಾದ ಸ್ಥಾನವನ್ನು ಪಡೆದಿದ್ದಾರೆ. ಶಿವರಾಂರವರು ಹ್ಯಾಂಡ್‍ಬಾಲ್‍ಗೆ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ ಎಂದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಸುರೇಶ್ ಮಾತನಾಡಿ, ಶಿವರಾಂರವರು ತಮ್ಮ ಮಕ್ಕಳಿಗಿಂತ ಶಾಲೆಯ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸುತ್ತಾರೆ ಆವರ ಆಟ-ಪಾಠದ ಬಗ್ಗೆ ಗಮನ ನೀಡುವುದರ ಮೂಲಕ ಅವರ ಅಭೀವೃದ್ದಿಯನ್ನು ಬಯಸಿದ್ದಾರೆ. ಮಕ್ಕಳಲ್ಲಿ ಕ್ರೀಡಾ ಮನೋಭಾವ ಬರುವಂತೆ ಮಾಡಿದ್ದಾರೆ. ಶಿವರಾಂರವರು ಕ್ರೀಡಾ ಕ್ಷೇತ್ರದಲ್ಲಿ ಶಕ್ತಿಯಾಗಿ ರೂಪುಗೊಂಡಿದ್ದಾರೆ.  ಶ್ರಮ ಹಾಲಿ ಹ್ಯಾಂಡ್ ಬಾಲ್ ತಂಡವನ್ನು ಕಟ್ಟಿದ್ದಾರೆ, ಅದರ ಬೆಳವಣಿಗೆಯಲ್ಲಿ ಶಿವರಾಂರವರ ಪಾತ್ರ ಹೆಚ್ಚಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆದ ರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಸುತ್ತ ಅಖಿಲ ಭಾರತ ವಿಶ್ವ ವಿದ್ಯಾಲಯದ ಹ್ಯಾಂಡ್ ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿರುವ ಸಾವಂತ್ ಹಿಮಗಿರಿ, ಜನವರಿ 09 ರಿಂದ ಜನವರಿ 13ರವರೆಗೆ ರಾಜಸ್ಥಾನದ ಕರೋಲಿಯಲ್ಲಿ ನಡೆಯುವ 20 ವರ್ಷದೊಳಗಿನ ಬಾಲಕರ ವಿಭಾಗದ 46ನೇ ರಾಷ್ಟ್ರೀಯ ಹ್ಯಾಂಡ್‍ಬಾಲ್‍ನಲ್ಲಿ ಭಾಗವಹಿಸುತ್ತಿರುವ ಈ.ಕುಮಾರ್ ಮತ್ತು ವಿ.ಶ್ರೀನಿವಾಸ್ ರವರನ್ನು ಸನ್ಮಾನಿಸಿ ಬೀಳ್ಕೂಡಲಾಯಿತು.

suddionenews

Recent Posts

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

8 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

8 hours ago

ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿ.ಪಂ ಸಿಇಒ

ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

8 hours ago

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು  ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…

8 hours ago

ವಾಹನ ಚಾಲನೆ ವೇಳೆ ತಾಳ್ಮೆ ಅಗತ್ಯ : ಮಹಾಂತೇಶ್

ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…

9 hours ago

ಮಹೇಶ್ ಮೋಟಾರ್ಸ್ ನಲ್ಲಿ ಹೊಸ ಹೀರೋ ಡೆಸ್ಟಿನಿ 125 ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…

9 hours ago