Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ : ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಟ್ವೀಟ್…!

---Advertisement---

 

ನವದೆಹಲಿ: ಮೇಕೆದಾಟು ಯೋಜನೆಗಾಗಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆಯೂ ನಡೆದಿತ್ತು. ಅಧಿಕಾರಕ್ಕೆ ಬಂದ‌ ಮೇಲೂ ಮೇಕೆದಾಟು ವಿಚಾರವಾಗಿ ಮಾತನಾಡಿದ್ದಾರೆ. ಆದರೆ ಮೇಕೆದಾಟು ವಿಚಾರಕ್ಕೆ ಇದೀಗ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರಾಜ್ಯದ ಸಿಎಂ ಸಿದ್ದರಾಮಯ್ಯ ವಿರುದ್ಧ ಗರಂ ಆಗಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್ ಮಾಡಿರುವ ಅವರು, ಕರ್ನಾಟಕ ಸಿಎಂ ಸಿದ್ದರಾಮಯ್ಯ ನವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸ್ಸಿಗರಿಗೆ ಅಂಟಿದ ಚಟ ಎಂದು ನಮಗೆ ಎಲ್ಲರಿಗೂ ಗೊತ್ತು. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ, ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಯಾರೂ ಭಾವಿಸಿರಲಿಲ್ಲ.

ಮೇಕೆದಾಟು ಸ್ಥಿತಿ-ಗತಿ, ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ.‌ ನಿಮಗೆ ವಿವರಿಸುವ ತಂಡ ನೀಡಿದ ಅರ್ಧಂಬರ್ಧ ಮಾಹಿತಿ ಆಧರಿಸಿ, ನೀವೂ ತಪ್ಪು ಮಾಹಿತಿಯ ಸರಣಿಯನ್ನೇ ಹರಿಬಿಟ್ಟಂತೆ ಕಾಣುತ್ತದೆ. ಹೀಗಾಗಿ ವಾಸ್ತವಾಂಶ ಏನೆಂಬುದನ್ನು ನಾವೇ ಹೇಳಬೇಕಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಮೊದಲನೆಯದಾಗಿ CWMA ಯ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ  ಈ  ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ.

ಕಳಸಾ ಮತ್ತು ಬಂಡೂರಿ ನಾಲೆ ಯೋಜನೆ ಡಿಪಿಆರ್‌ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ ಮತ್ತು ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ?

2017-17ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY)- ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ, ಮೂರು  ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ ?

ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ 28.10.2023ರ ವರೆಗೆ ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ. ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು‌‌ ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು  ತೋರಬಹುದು ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment