ಬೆಂಗಳೂರು; ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಸಮನ್ಸ್ ಜಾರಿ ಮಾಡಿದ್ದರು ಸಹ ಕೋರ್ಟ್ ಗೆ ಹಾಜರಾಗಿರಲಿಲ್ಲ. ಆದರೆ ಆ ಬಳಿಕ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಗರಂ ಆಗಿದ್ದರು, ಕೋರ್ಟ್ ಗೆ ಖುದ್ದು ಹಾಜರಾಗದೆ ಇದ್ದಲ್ಲಿ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗುವುದು ಎಂದು ಹೇಳಿದ ಕೂಡಲೇ ಓಡೋಡಿ ಕೋರ್ಟ್ ಗೆ ಹಾಜರಾಗಿದ್ದಾರೆ.
2013ರಲ್ಲಿ ಕೆ.ಹೆಚ್.ಮುನಿಯಪ್ಪ ಹಾಗೂ ಲಕ್ಷ್ಮೀ ನಾರಾಯಣ್ ಎನ್ನುವವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿತ್ತು. ಅಂದಿನ ವಿಧಾನಸಭಾ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿ.ಶಂಕರ್ ಮೇಲೆ ಅಂದಿನ ಸಂಸದರಾಗಿದ್ದ ಮುನಿಯಪ್ಪ ಹಾಗೂ ಅವರ ಬೆಂಬಲಿಗರು ಹಲ್ಲೆ ಮಾಡಿದ್ದರು ಎಂಬ ಆರೋಪಗಳು ಕೇಳಿ ಬಂದಿತ್ತು. ಈ ಸಂಬಂಧ ಕೇಸ್ ಕೂಡ ದಾಖಲಾಗಿತ್ತು.
ಬಳಿಕ ಈ ಕೇಸ್ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ನಿಂದ ಷರತ್ತು ಬದ್ಧ ಜಾಮೀನು ಕೂಡ ಮಂಜೂರಾಗಿತ್ತು. 50 ಸಾವಿರ ರೂಪಾಯಿ ಬಾಂಡ್ ನೀಡಬೇಕಿತ್ತು. ಈಗ ಮತ್ತದೇ ಕೇಸಲ್ಲಿ ಕೋರ್ಟ್ ನಲ್ಲಿ ವಿಚಾರಣೆಗೆ ಬಂದಿದ್ದು ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದರು. ಜಡ್ಜ್ ಕೊಟ್ಟ ಎಚ್ಚರಿಕೆಯಿಂದ ಸಚಿವರಿಗೆ ಶಾಕ್ ಆಗಿದ್ದು, ಖುದ್ದು ಕೋರ್ಟ್ ಗೆ ಹಾಜರಾಗಿದ್ದಾರೆ.
ಚಿತ್ರದುರ್ಗ. ಮಾರ್ಚ್18 : ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಒಂದು ಪ್ರಮುಖ ಘಟ್ಟವಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಇದೇ ಮಾರ್ಚ್ 21…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಕಡೆಗೂ ಇಡೀ ಭಾರತೀಯರೆಲ್ಲ ನಿರೀಕ್ಷೆ ಮಾಡುತ್ತಿದ್ದ ದಿನ ಬಂದೇ ಬಿಟ್ಟಿದೆ. ಸುನೀತಾ ವಿಲಿಯಮ್ಸ್ ಭೂಮಿಗೆ ಬರೋದಕ್ಕೆ ಕ್ಷಣಗಣನೆ ಶುರುವಾಗಿದೆ. ಕೇವಲ…
ಬೆಂಗಳೂರು; ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಕುಟುಂಬಸ್ಥರ ವಿರುದ್ಧ ಭೂ ಒತ್ತುವರಿಯ ಗಂಭೀರ ಆರೋಪ ಕೇಳಿ ಬಂದಿತ್ತು. ಭೂ ಒತ್ತುವರಿ…