Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ : ವಿವಿಧ ಸಂಘಟನೆಗಳ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 04 : ಇಲ್ಲಿನ ಪಿ.ವಿ.ಎಸ್. ಆಸ್ಪತ್ರೆಯಲ್ಲಿ ಸ್ವಚ್ಚತೆ ಕೆಲಸ ಮಾಡುತ್ತಿರುವ ಅಂಜಿನಮ್ಮಳ ಮೇಲೆ ಆಸ್ಪತ್ರೆಯ ವಾಹನ ಚಾಲಕ ಮಂಜುನಾಥ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂಧಿಸಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕರುನಾಡ ವಿಜಯಸೇನೆ, ಭಾರತೀಯ ದಲಿತ ಸಂಘರ್ಷ ಸಮಿತಿ, ದಲಿತ ಸಂಘರ್ಷ ಸಮಿತಿ, ದಲಿತ ಸಂರಕ್ಷಣಾ ವೇದಿಕೆ ಕಾರ್ಯಕರ್ತರು ಅಂಜಿನಮ್ಮಳ ಮೇಲೆ ಹಲ್ಲೆ ನಡೆಸಿರುವ ವಾಹನ ಚಾಲಕ ಮಂಜುನಾಥನನ್ನು ಕೂಡಲೆ ಬಂಧಿಸಬೇಕು. ಇಲ್ಲವಾದಲ್ಲಿ ನ.7 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿತ್ರದುರ್ಗಕ್ಕೆ ಆಗಮಿಸುವ ಸಂದರ್ಭದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಲಾಗುವುದೆಂದು ಎಚ್ಚರಿಸಿದರು.

ಕಳೆದ ಹದಿನೈದು ವರ್ಷಗಳಿಂದಲೂ ಪಿ.ವಿ.ಎಸ್. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಅಂಜಿನಮ್ಮ ಕಳೆದ ತಿಂಗಳು 31 ರಂದು ಕೆಲಸಕ್ಕೆ ತಡವಾಗಿ ಬಂದಾಗ ಸಿಟ್ಟಿಗೆದ್ದ ಚಾಲಕ ಮಂಜುನಾಥ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಲ್ಲದೆ ಕೆಲಸಕ್ಕೆ ಬರಬಾರದೆಂದು ಬೆದರಿಕೆಯೊಡ್ಡಿದ್ದಾನೆ. ಈ ಸಂಬಂಧ ಸೋಮವಾರ ದೂರು ದಾಖಲಾಗಿದ್ದು, ಮಂಜುನಾಥನನ್ನು ಠಾಣೆಗೆ ಕರೆಸಿ ನಂತರ ಮಧ್ಯರಾತ್ರಿ ಬಿಟ್ಟಿರುವುದು ನಾನಾ ರೀತಿಯ ಅನುಮಾನಗಳಿಗೆ ಕಾರಣವಾಗಿದೆ. ಹಾಗಾಗಿ ಡಿಸಿಆರ್‍ಇ. ಇನ್ಸ್‍ಪೆಕ್ಟರ್
ಜಯನಾಯ್ಕನನ್ನು ಅಮಾನತ್ತುಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಭಾರತೀಯ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಬೀರಾವರ ಪ್ರಕಾಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ, ದಾವಣಗೆರೆ ಜಿಲ್ಲೆ ಡಿಎಸ್‍ಎಸ್. ಮುಖಂಡ ಮೈಲಾರಪ್ಪ, ಮುಜಾಹಿದ್, ರಮೇಶ್, ಹೆಚ್.ವೆಂಕಟೇಶ್, ಚನ್ನಮ್ಮ, ರತ್ನಮ್ಮ, ಗಾಂಧಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now