Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸತ್ ಮೇಲೆ ದಾಳಿ : ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಕಿಡಿ

Facebook
Twitter
Telegram
WhatsApp

ಬೆಂಗಳೂರು: ಇಂದು ಇಡೀ ದೇಶವೇ ಬೆಚ್ಚಿಬೀಳುವಂತ ಘಟನೆ ನಡೆದಿದೆ. ಸಂಸತ್ ಮೇಲೆ ನಡೆದ ದಾಳಿ ಖಂಡನೀಯವಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಪರಿಚಿತರಿಗೆ ಪಾಸ್ ನೀಡಿದ್ದನ್ನು ಖಂಡಿಸಿದ್ದಾರೆ.

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹಸಚಿವ @AmitShah ಅವರ ಕರ್ತವ್ಯವಾಗಿದೆ.

ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ @BJP4India ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ.

ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ @mepratap ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ.

ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ @narendramodi ಅವರದ್ದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

error: Content is protected !!