ಚಿತ್ರದುರ್ಗದಲ್ಲಿ ಪತ್ರಿಕಾ ವಿತರಕರ ಮೇಲೆ ಹಲ್ಲೆ : ಆರೋಪಿ ವಿರುದ್ಧ ಕ್ರಮಕ್ಕೆ ಮನವಿ

1 Min Read

 

ಚಿತ್ರದುರ್ಗ, (ಜ.23) : ಪತ್ರಿಕಾ ವಿತರಕರ ಮೇಲಿನ ಹಲ್ಲೆ ಖಂಡಿಸಿ ಮತ್ತು ಆರೋಪಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರುಶುರಾಮ ಅವರಿಗೆ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಿಕಾ ಹಂಚಿಕರದಾರರು/ ವಿತರಕರ ಸಂಘ ಮತ್ತು ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದೂರು ಸಲ್ಲಿಸಲಾಯಿತು.

ಕಳೆದ ಎರಡು ದಿನಗಳ ಹಿಂದೆ ಭೀಮಸಮುದ್ರದ ವಿತರಕ ವೇದಮೂರ್ತಿ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪತ್ರಿಕಾ ವಿತರಕರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮಗಳನ್ನು  ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ, ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘ ಅಧ್ಯಕ್ಷ ಶಂಕರ್ ಕುದುರೆಮುಖ (ಗದಗ) ಪದಾಧಿಕಾರಿಗಳಾದ  ಸುರೇಶ್,  ತಿಪ್ಪೇಸ್ವಾಮಿ, ಮೋಹನ್, ಮಂಜುನಾಥ್, ಚಂದ್ರಶೇಖರ್, ಕರಿಬಸಪ್ಪ, ಪ್ರಹ್ಲಾದ್, ನಾಗರಾಜ್ ಸೇರಿದಂತೆ ನಗರದ ಪ್ರಮುಖ  ವಿತರಕರು ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *