ಚಿತ್ರದುರ್ಗ, (ಜ.23) : ಪತ್ರಿಕಾ ವಿತರಕರ ಮೇಲಿನ ಹಲ್ಲೆ ಖಂಡಿಸಿ ಮತ್ತು ಆರೋಪಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರುಶುರಾಮ ಅವರಿಗೆ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಿಕಾ ಹಂಚಿಕರದಾರರು/ ವಿತರಕರ ಸಂಘ ಮತ್ತು ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದೂರು ಸಲ್ಲಿಸಲಾಯಿತು.
ಕಳೆದ ಎರಡು ದಿನಗಳ ಹಿಂದೆ ಭೀಮಸಮುದ್ರದ ವಿತರಕ ವೇದಮೂರ್ತಿ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪತ್ರಿಕಾ ವಿತರಕರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ, ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘ ಅಧ್ಯಕ್ಷ ಶಂಕರ್ ಕುದುರೆಮುಖ (ಗದಗ) ಪದಾಧಿಕಾರಿಗಳಾದ ಸುರೇಶ್, ತಿಪ್ಪೇಸ್ವಾಮಿ, ಮೋಹನ್, ಮಂಜುನಾಥ್, ಚಂದ್ರಶೇಖರ್, ಕರಿಬಸಪ್ಪ, ಪ್ರಹ್ಲಾದ್, ನಾಗರಾಜ್ ಸೇರಿದಂತೆ ನಗರದ ಪ್ರಮುಖ ವಿತರಕರು ಹಾಜರಿದ್ದರು.
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…