S R ವಿಶ್ವನಾಥ್ ಹತ್ಯೆಗೆ ಸ್ಕೆಚ್ : ಮಧ್ಯಾಹ್ನ ಸುದ್ದಿಗೋಷ್ಟಿಯಲ್ಲಿ ಎಲ್ಲಾ ಹೇಳುತ್ತೇನೆಂದ ಶಾಸಕ..!

1 Min Read

ಬೆಂಗಳೂರು: ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಹಾಕಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆ ಸಿಸಿಬಿ ಪೊಲೀಸರು ಈಗಾಗಲೇ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಷ ಅವರನ್ನು ವಿಚಾರಣೆ ನಡೆಸಿದ್ದಾರೆ.

ಇದೇ ವೇಳೆ ಈ ಘಟನೆ ಸಂಬಂಧ ಮಾತನಾಡಿರುವ ಎಸ್ ಆರ್ ವಿಶ್ವನಾಥ್, ನನಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಸದ್ಯಕ್ಕೆ ಚುನಾವಣೆಯ ಪ್ರಚಾರದಲ್ಲಿದ್ದೇನೆ. ಮಧ್ಯಾಹ್ನದ ವೇಳೆಗೆ ಸುದ್ದಿಗೋಷ್ಟಿ ನಡೆಸಿ ಈ ಬಗ್ಗೆ ಎಲ್ಲಾ ರೀತಿಯ ಮಾಹಿತಿಯನ್ನ ನೀಡುತ್ತೇನೆ. ಆ ಸಂಬಂಧ ಒಂದು ವಿಡಿಯೋ ಕೂಡ ಇದೆ. ಅದನ್ನ ರಿಲೀಸ್ ಮಾಡ್ತೇನೆ. ಅದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ ಎಂದಿದ್ದಾರೆ.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ವಿಶ್ವನಾಥ್ ಅವರ ಆಪ್ತ ದೇವರಾಜ್ ಅಲಿಯಾಸ್ ಕುಳ್ಳ ದೇವರಾಜ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *