Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಚಿವ ಶಿವರಾಜ್ ತಂಗಡಗಿ ಆಪ್ತನ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನ : ಕೊಪ್ಪಳದ ಯುವಕನ ಸ್ಥಿತಿ ಈಗ ಹೇಗಿದೆ..?

---Advertisement---

 

 

ಕೊಪ್ಪಳ: ಸಚಿವ ಶಿವರಾಜ್ ತಂಗಡಗಿ ಆಪ್ತನ ಮೇಲೆ ಕಿರುಕುಳದ ಆರೋಪ ಕೇಳಿ ಬಂದಿದೆ. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅಮರೇಶ್ ಗೋನಾಳ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಸಿದ್ದು ಮಾಲಿ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆ ಗಂಗಾವತಿ ತಾಲೂಕಿನಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕ ಈ ಸಂಬಂಧ ಮಾತನಾಡಿದ್ದು, ನಾನು ಗಾಡಿಗೆ ಹೋಗುತ್ತಿದ್ದೆ. ಗಾಡಿಯಿಂದ ಬಂದ ಮೇಲೆ ಮಾಲೀಕರಿಗೆ ಹಣ ಕೊಡುವುದು ಬಾಕಿ ಇತ್ತು. ಹಣ ಕೊಡುವುದಕ್ಕೆಂದು ಹೋದಾಗ, ಅಲ್ಲೆ ಇದ್ದ ಅಮರೇಶ್ ಗೋನಾಳ ನನ್ನನ್ನು ಕರೆದು ಬೈದರು. ಪೊಲೀಸರಿಂದ ಟಾರ್ಚರ್ ಕೊಡಿಸಿದರು. ಆ ಟಾರ್ಚರ್ ತಡೆಯುವುದಕ್ಕೆ ಆಗದೆ ಆತ್ಮಹತ್ಯೆಗೆ ಯತ್ನಿಸಿದೆ ಎಂದಿದ್ದಾರೆ.

ಇನ್ನು ಅಮರೇಶ್ ಗೋನಾಳರನ್ನು ಸಚಿವ ಶಿವರಾಜ್ ತಂಗಡಗಿ ಆಪ್ತ ಎನ್ನಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ ವಿಷ ತೆಗೆದುಕೊಂಡ ತಕ್ಷಣ ಪೊಲೀಸ್ ಠಾಣೆಗೆ ಹೋಗಿದ್ದಾನೆ. ಹೀಗಾಗಿ ಪೊಲೀಸರು ತಕ್ಷಣ ಆ ಯುವಕನನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...