ಮಾರ್ಚ್ ತಿಂಗಳು ಆರಂಭವಾಗಿದ್ದು, ಈ ತಿಂಗಳು ಹಬ್ಬಗಳ ಸುರಿಮಳೆಯೇ ಇದೆ. ಹಲವು ಪ್ರಮುಖ ಹಬ್ಬಗಳ ಕಾರಣದಿಂದಾಗಿ ಬ್ಯಾಂಕ್‌ಗಳಿಗೆ ಹೆಚ್ಚಿನ ರಜೆ ಇರಲಿದೆ.ಹೋಳಿ, ಈದ್, ಮಹಾವೀರ ಜಯಂತಿ ಮತ್ತು ರಾಮನವಮಿ ಸೇರಿದಂತೆಹಲವು ಹಬ್ಬಗಳಿವೆ. ಹಾಗೂ ಶನಿವಾರ ಮತ್ತು ಭಾನುವಾರಗಳನ್ನು ಸೇರಿಸಿದರೆ, ಈ ತಿಂಗಳು ಒಟ್ಟು 18 ದಿನಗಳ ಕಾಲ ಬ್ಯಾಂಕ್‌ಗಳು ಮುಚ್ಚಿರುತ್ತವೆ.
ಮಾರ್ಚ್ 19:ಯುಗಾದಿ, ಗುಡಿ ಪಾಡ್ವಾ, ತೆಲುಗು ಹೊಸ ವರ್ಷ – ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದಲ್ಲಿ ಬ್ಯಾಂಕ್‌ಗಳಿಗೆ ರಜೆ.
ಮಾರ್ಚ್ 21:ಈದ್–ಉಲ್–ಫಿತರ್ (ರಂಜಾನ್) – ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ರಜೆ.
ಮಾರ್ಚ್ 26:ಶ್ರೀರಾಮನವಮಿ – ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ರಜೆ.
ಮಾರ್ಚ್ 31:ಮಹಾವೀರಜಯಂತಿ – ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ದೆಹಲಿ ಮತ್ತು ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಬ್ಯಾಂಕ್ ರಜೆ.
ಮಾರ್ಚ್ 1, 8, 15, 22 ಮತ್ತು 29 ರಂದು ಭಾನುವಾರ ಇರುವುದರಿಂದ ದೇಶಾದ್ಯಂತ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ಹಾಗೆಯೇ, ಮಾರ್ಚ್ 14 (ಎರಡನೇಶನಿವಾರ) ಮತ್ತು ಮಾರ್ಚ್ 28 (ನಾಲ್ಕನೇಶನಿವಾರ) ರಂದೂ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









