ಚಿತ್ರದುರ್ಗ. ಆ.13: ಬೆಸ್ಕಾಂ ನಗರ ಉಪ-ವಿಭಾಗ ವ್ಯಾಪ್ತಿಯಲ್ಲಿ ಅಕ್ರಮ-ಸಕ್ರಮ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯಲು ಹಾಗೂ ನಿಗದಿತ ಹಣ ಪಾವತಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.
ಈ ಹಿಂದೆ ರೂ.50 ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳು, ನಿಯಮಾನುಸಾರ ರೂ.10,000 ದಂಡ ಶುಲ್ಕದೊಂದಿಗೆ ಇತರೆ ನಿಗದಿತ ಮೊತ್ತವನ್ನು ಪಾವತಿಸಿ ವಿದ್ಯುತ್ ಸಂಪರ್ಕ ಪಡೆಯಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ.
ಈ ಸೌಲಭ್ಯವು ಈಗಾಗಲೇ ಸಿದ್ಧಗೊಂಡಿರುವ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿರುವವರಿಗೆ ಮಾತ್ರ ಅನ್ವಯಿಸಲಿದೆ. ಈ ಹಿಂದೆ ರೂ.50 ಪಾವತಿಸಿರುವ ಅರ್ಜಿದಾರರು ತಮ್ಮ ಹೆಸರು ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಂಡು, ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಬೆಸ್ಕಾಂ ಕಚೇರಿಯನ್ನು ಸಂಪರ್ಕಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು. ಅರ್ಹ ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.









