Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ : ನಿಮ್ಮ ಮನೆಗೂ ಬರಲಿದ್ದಾರೆ ಬೆಸ್ಕಾಂ ಸಿಬ್ಬಂದಿ; ಸಮೀಕ್ಷೆಗೆ ಈ ದಾಖಲೆಗಳು ಕಡ್ಡಾಯ!

---Advertisement---

ಚಿತ್ರದುರ್ಗ. ಜುಲೈ. 02:  ರಾಜ್ಯ ಸರ್ಕಾರದ ನಿರ್ದೇಶನದಂತೆ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ‘ಗೃಹ ಜ್ಯೋತಿ’ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯ ಹಾಗೂ ಸಮೀಕ್ಷೆ ಜುಲೈ 1ರಿಂದ ಆರಂಭವಾಗಿದೆ.

ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಒಳಪಡುವ ಪಂಡರಹಳ್ಳಿ, ತುರುವನೂರು, ಹಿರೇಗುಂಟನೂರು, ಭೀಮಸಮುದ್ರ, ಭರಮಸಾಗರ ಮತ್ತು ಸಿರಿಗೆರೆ ಶಾಖಾ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಯಲಿದೆ. ಬೆಸ್ಕಾಂ ನೌಕರರು, ಮೀಟರ್ ರೀಡರ್‌ಗಳು ಹಾಗೂ ಗ್ರಾಮ ವಿದ್ಯುತ್ ಪ್ರತಿನಿಧಿಗಳು ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸಲಿದ್ದಾರೆ.

ಬೆಸ್ಕಾಂ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿದಾಗ ಸಾರ್ವಜನಿಕರು ಆಧಾರ್ ಕಾರ್ಡ್ ಪ್ರತಿ, ಭಾವಚಿತ್ರ , ಪಾನ್ ಕಾರ್ಡ್, ವೋಟರ್ ಐಡಿ, ರೇಷನ್ ಕಾರ್ಡ್, ಹಾಗೂ ಜಾತಿ ಪ್ರಮಾಣ ಪತ್ರದೊಂದಿಗೆ ಸಮೀಕ್ಷೆಗೆ ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಸಂಬಂಧಪಟ್ಟ ಶಾಖಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು ಭರಮಸಾಗರ-9449876302, ಸಿರಿಗೆರೆ-9449246642, ಹಿರೇಗುಂಟನೂರು-9449876261, ಭೀಮಸಮುದ್ರ-94499876252, ಪಂಡರಹಳ್ಳಿ-9449246642 ಹಾಗೂ ತುರುವನೂರು ಶಾಖೆಗೆ 6360140436 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now