Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಜನರೇ ಗಮನಿಸಿ; ಮುಂದಿನ 2 ದಿನಗಳ ಕಾಲ ಸರ್ಕಾರದ ಡಾಟಾ ಸೆಂಟರ್ ಸೇವೆಗಳು ಸ್ಥಗಿತ!

---Advertisement---

ಬೆಂಗಳೂರು.ಜೂನ್.25 : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಡಿಜಿಟಲ್ ಸೇವೆಗಳಿಗೆ ಕೇಂದ್ರಬಿಂದುವಾಗಿರುವ ರಾಜ್ಯ ಡೇಟಾ ಸೆಂಟರ್ ನಲ್ಲಿ ಮಹತ್ವದ ತಾಂತ್ರಿಕ ನಿರ್ವಹಣೆ, ಮೂಲಸೌಕರ್ಯ ನವೀಕರಣ ಹಾಗೂ ಭದ್ರತಾ ಸುಧಾರಣೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ಎರಡು ದಿನಗಳ ಕಾಲ ಡೇಟಾ ಸೆಂಟರ್ ಸೇವೆಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಅನೇಕ ಇಲಾಖೆಗಳ ವೆಬ್ ಪೋರ್ಟಲ್ ಗಳು, ನಾಗರಿಕ ಸೇವಾ ವ್ಯವಸ್ಥೆಗಳು, ವಿವಿಧ ಪ್ರಮಾಣಪತ್ರಗಳಿಗೆ ಸಂಬಂಧಿಸಿದ ಆನ್ ಲೈನ್ ಸೇವೆಗಳು, ಇ-ಆಫೀಸ್ ವ್ಯವಸ್ಥೆಗಳು, ಇಲಾಖೆಗಳ ಡಿಜಿಟಲ್ ಡೇಟಾಬೇಸ್ ಗಳು ಸೇರಿದಂತೆ ಹಲವು ತಂತ್ರಜ್ಞಾನ ಆಧಾರಿತ ಸರ್ಕಾರಿ ಸೇವೆಗಳು ಈ ಡೇಟಾ ಸೆಂಟರ್ ಮೂಲಕ ಕಾರ್ಯನಿರ್ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ನಿರ್ವಹಣಾ ಕಾರ್ಯ ನಡೆಯುವ ಅವಧಿಯಲ್ಲಿ ಕೆಲವು ಸೇವೆಗಳ ಲಭ್ಯತೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ರಾಜ್ಯದ ಡಿಜಿಟಲ್ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠ ಮತ್ತು ಸುರಕ್ಷಿತವಾಗಿಸಲು ಹಾಗೂ ಸಾಮರ್ಥ್ಯ ಹೆಚ್ಚಿಸಲು ಈ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಭವಿಷ್ಯದಲ್ಲಿ ನಾಗರಿಕರಿಗೆ ಇನ್ನಷ್ಟು ವೇಗವಾಗಿ, ಯಾವುದೇ ತಾಂತ್ರಿಕ ಅಡಚಣೆಗಳಿಲ್ಲದೆ ಮತ್ತು ಸುರಕ್ಷಿತ ರೀತಿಯಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ಅಪ್ಗ್ರೇಡ್ ಅತ್ಯಂತ ಅಗತ್ಯವಾಗಿದೆ.

ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿ ಡಿಜಿಟಲ್ ಸೇವೆಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಇದರಿಂದ ಡೇಟಾ ಸಂಸ್ಕರಣಾ ಸಾಮರ್ಥ್ಯ, ಸೈಬರ್ ಭದ್ರತೆ, ಸರ್ವರ್ ಕಾರ್ಯಕ್ಷಮತೆ ಹಾಗೂ ಸೇವೆಗಳ ಸ್ಥಿರತೆಯನ್ನು ಸುಧಾರಿಸುವ ಅಗತ್ಯ ಎದುರಾಗಿದೆ. ಇದೇ ಕಾರಣಕ್ಕೆ ತಜ್ಞರ ಸಲಹೆ ಮೇರೆಗೆ ಈ ನಿರ್ವಹಣಾ ಕಾರ್ಯವನ್ನು ನಡೆಸಲಾಗುತ್ತಿದೆ.

ಈ ಎರಡು ದಿನಗಳ ಅವಧಿಯಲ್ಲಿ ಸಾರ್ವಜನಿಕರು ಸರ್ಕಾರಿ ಆನ್ ಲೈನ್ ಸೇವೆಗಳನ್ನು ಬಳಸುವಾಗ ಕೆಲವು ತಾತ್ಕಾಲಿಕ ಅಡಚಣೆಗಳನ್ನು ಎದುರಿಸಬಹುದು. ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗಬಾರದೆಂದು ರಜಾ ದಿನಗಳಲ್ಲಿ ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಕೋರುತ್ತೇನೆ.

ಇದು ತಾತ್ಕಾಲಿಕ ಅಸೌಕರ್ಯ ಮಾತ್ರ. ಆದರೆ ಈ ಕಾರ್ಯ ಪೂರ್ಣಗೊಂಡ ನಂತರ ರಾಜ್ಯದ ಇ-ಆಡಳಿತ ವ್ಯವಸ್ಥೆ ಮತ್ತಷ್ಟು ಸುಧಾರಣೆಗೊಳ್ಳಲಿದೆ. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ನಿರಂತರವಾಗಿ ತಂತ್ರಜ್ಞಾನ ಹೂಡಿಕೆಯನ್ನು ಮಾಡುತ್ತಿದೆ. ಕರ್ನಾಟಕವನ್ನು ದೇಶದಲ್ಲೇ ಅತ್ಯುತ್ತಮ ಡಿಜಿಟಲ್ ಆಡಳಿತ ವ್ಯವಸ್ಥೆ ಹೊಂದಿರುವ ರಾಜ್ಯವನ್ನಾಗಿ ರೂಪಿಸುವ ಗುರಿಯಿಂದ ಕ್ರಮಬದ್ಧವಾಗಿ ತಂತ್ರಜ್ಞಾನ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಗ್ಯಾರಂಟಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now