Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಡಿತರ ಚೀಟಿದಾರರ ಗಮನಕ್ಕೆ : ಇ-ಕೆವೈಸಿ ಮಾಡಿಸಲು ಅಕ್ಟೋಬರ್ 20 ರವರೆಗೆ ಕಾಲಾವಕಾಶ

---Advertisement---

ಬೆಂಗಳೂರು.ಸೆಪ್ಟೆಂಬರ್.18: ರೇಷನ್ ಕಾರ್ಡ್ ದಾರರ ಇ-ಕೆವೈಸಿ  (e-KYC)     ಪ್ರಕ್ರಿಯೆಯಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಹಾಗೂ ಸರ್ವರ್ ಮಂದಗತಿಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗೆ ಸ್ಪಂದನೆ ಸಿಕ್ಕಿದ್ದು, ಇ-ಕೆವೈಸಿ ಪೂರ್ಣಗೊಳಿಸುವ ಅಂತಿಮ ದಿನಾಂಕವನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಲಾಗಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ನೋಂದಣಿ ವೇಳೆ ಸರ್ವರ್ ಸಮಸ್ಯೆಯಿಂದ ಜನರು ಸರದಿ ಸಾಲಿನಲ್ಲಿ ನಿಂತು ಪರದಾಡುತ್ತಿರುವ ವರದಿಗಳು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದವು. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರ ಹಿತದೃಷ್ಟಿಯಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ.

ತಾಂತ್ರಿಕ ಕಾರಣಗಳಿಂದಾಗಿ ಯಾವುದೇ ಬಡ ಕುಟುಂಬವು ತನ್ನ ಹಕ್ಕಿನ ಉಚಿತ ಆಹಾರಧಾನ್ಯದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಅಕ್ಟೋಬರ್ 20 ರವರೆಗೆ ಕಾಲಾವಕಾಶ ನೀಡಲಾಗಿದೆ. ಸರ್ವರ್ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಾರ್ವಜನಿಕರು ಯಾವುದೇ ಗೊಂದಲ ಅಥವಾ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಫಲಾನುಭವಿಗಳು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಹಂತ-ಹAತವಾಗಿ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬಹುದು. ಸರ್ಕಾರ ಹಾಗೂ ಆಹಾರ ಇಲಾಖೆಯು ಸಾರ್ವಜನಿಕರ ಹಿತರಕ್ಷಣೆಗೆ ಸದಾ ಬದ್ಧವಾಗಿದ್ದು, ನೀಡಿರುವ ಹೆಚ್ಚುವರಿ ಸಮಯವನ್ನು ಸಾರ್ವಜನಿಕರು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Join WhatsApp

Join Now

Join Telegram

Join Now