Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳ ಗಮನಕ್ಕೆ: 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

---Advertisement---

ಸುದ್ದಿಒನ್,ಬೆಂಗಳೂರು,ಮೇ.13: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿಗಾಗಿ ಮೆಟ್ರಿಕ್ ಪೂರ್ವ (Pre-Matric) ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸರ್ಕಾರಿ ವಸತಿ ನಿಲಯಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕವೇ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಅಗತ್ಯವಿರುವ ದಾಖಲೆಗಳು:
ಅರ್ಜಿ ಸಲ್ಲಿಸುವ ಸಮಯದಲ್ಲಿ ಈ ಕೆಳಗಿನ ವಿವರಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ:

SATS ಐಡಿ (Student Achievement Tracking System ID)

ಜಾತಿ ಮತ್ತು ಆದಾಯ ಪ್ರಮಾಣಪತ್ರ (RD ಸಂಖ್ಯೆ)

ಆಧಾರ್ ಸಂಖ್ಯೆ

ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ

ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ಪೋರ್ಟಲ್ ಆದ https://swdhmis.karnataka.gov.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೆನಪಿರಲಿ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 30, 2026.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now