Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಹಕರ ಗಮನಕ್ಕೆ : ಸಿಲಿಂಡರ್ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ

---Advertisement---

ದಾವಣಗೆರೆ.ಆಗಸ್ಟ್8 : ಜಿಲ್ಲೆಯ ಎಲ್ಲಾ ಬಿಪಿಸಿಎಲ್, ಹೆಚ್‍ಪಿಸಿಎಲ್ ಹಾಗೂ   ಐಓಸಿಎಲ್ ಅನಿಲ ಗ್ರಾಹಕರ ತಮ್ಮ ಬಾಕಿ ಇರುವ ಇ-ಕೆವೈಸಿ ಪ್ರಕ್ರಿಯೆಯನ್ನು ಆಗಸ್ಟ್ 15 ರೊಳಗಾಗಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕು.

ಗ್ರಾಹಕರ ಪರಿಶೀಲನೆಯನ್ನು ಬಲಪಡಿಸಲು, ಅರ್ಹ ಫಲಾನುಭವಿಗಳ ನಿಖರ ದಾಖಲೆಗಳನ್ನು ನಿರ್ವಹಿಸಲು ಮತ್ತು ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವನ್ನು ಕೈಗೊಳ್ಳಲಾಗಿದೆ. ನಿಗಧಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸದ ಅನಿಲ ಗ್ರಾಹಕರ ಎಲ್‍ಪಿಜಿ ಸಂಪರ್ಕವನ್ನು ತಾತ್ಕಾಲಿಕವಾಗಿ ಅಮಾನತ್ತುಗೊಳಿಸಲಾಗುವುದು.

ಗ್ರಾಹಕರು ತಮ್ಮ ವ್ಯಾಪ್ತಿಯ ಗ್ಯಾಸ್ ವಿತರಕರ ಕಚೇರಿಗಳು, ವಿಶೇಷ ಶಿಬಿರಗಳು ಅಥವಾ ಗ್ಯಾಸ್ ಡೋರ್ ಡಿಲೇವರಿ ಸಂದರ್ಭದಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.  ಸಾರ್ವಜನಿಕರು ಗ್ಯಾಸ್ ಪೂರೈಕೆಯಲ್ಲಿ ಆಗುವ ವ್ಯತ್ಯಯವನ್ನು ತಪ್ಪಿಸಲು ತಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ. ತಿಳಿಸಿದ್ದಾರೆ.

Join WhatsApp

Join Now

Join Telegram

Join Now