Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ 14 ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಕೊನೆ ದಿನ

---Advertisement---

ಬಳ್ಳಾರಿ,ಆ.12 : ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ’ಯಡಿ ವಿವಿಧ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದ್ದು, ನೋಂದಣಿಗೆ ಆಗಸ್ಟ್ 14 ಕೊನೆಯ ದಿನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

 

ಈ ಯೋಜನೆಯಡಿ ಬೆಳೆ ಸಾಲ ಪಡೆದ ಹಾಗೂ ಪಡೆಯದ ಇಬ್ಬರೂ ರೈತರು ಭಾಗವಹಿಸಬಹುದಾಗಿದೆ. ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಯಾವುದೇ ಬ್ಯಾಂಕ್‌ನಲ್ಲಿ ಸಾಲ ಪಡೆದಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ಸಲ್ಲಿಸುವುದನ್ನು ಈ ವರ್ಷದಿಂದ ಕಡ್ಡಾಯಗೊಳಿಸಲಾಗಿದೆ.

ವಿಮೆಗೊಳಪಡುವ ಬೆಳೆಗಳು:
ಗ್ರಾಮ ಪಂಚಾಯಿತಿ ಮಟ್ಟ: ಭತ್ತ (ನೀರಾವರಿ)
ಹೋಬಳಿ ಮಟ್ಟ: ತೊಗರಿ (ಮಳೆಯಾಶ್ರಿತ), ರಾಗಿ (ಮಳೆಯಾಶ್ರಿತ), ಸಜ್ಜೆ (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ), ಹುರುಳಿ (ಮಳೆಯಾಶ್ರಿತ) ಮತ್ತು ನೆಲಗಡಲೆ (ನೀರಾವರಿ/ಮಳೆಯಾಶ್ರಿತ).
ಮೇಲ್ಕಂಡ ಎಲ್ಲಾ ಬೆಳೆಗಳಿಗೆ ವಿಮೆ ನೋಂದಾಯಿಸಲು ಆಗಸ್ಟ್ 14, 2026 ಕೊನೆಯ ದಿನಾಂಕವಾಗಿದೆ.
ಅರ್ಹ ರೈತರು ತಮ್ಮ ಸಮೀಪದ ಸ್ಥಳೀಯ ಬ್ಯಾಂಕ್‌ಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳ ಮೂಲಕ ವಿಮೆ ನೋಂದಣಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರಾಜ್ಯ ಸರ್ಕಾರದ ‘ಸಂರಕ್ಷಣೆ’ ಪೋರ್ಟಲ್
(https://www.samrakshane.karnataka.gov.in)
ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now