ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಸುದ್ದಿಒನ್, ಚಿತ್ರದುರ್ಗ, ಆ.12 : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರದ ಸೂಚನೆಯಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಸುಲಭವಾಗಿ ರಾಷ್ಟ್ರಧ್ವಜ ಲಭ್ಯವಾಗುವಂತೆ ಮಾಡಲು ಅಗತ್ಯ ಪ್ರಮಾಣದ ರಾಷ್ಟ್ರ ಧ್ವಜಗಳನ್ನು ನಗರದ ತ.ರಾ.ಸು. ರಂಗಮಂದಿರ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ದಾಸ್ತಾನು ಮಾಡಿ, ಇದೇ ಕಚೇರಿಯಲ್ಲಿ ವಿತರಿಸಲಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಗೆ 25000 ರಾಷ್ಟ್ರಧ್ವಜ ಹಂಚಿಕೆ ಮಾಡಲಾಗಿದೆ.
ಎಲ್ಲ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಗಳ ಮೂಲಕವೂ ಸಾರ್ವಜನಿಕರಿಗೆ ರಾಷ್ಟ್ರಧ್ವಜ ಲಭ್ಯವಾಗುವಂತೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೂ ಹಂಚಿಕೆ ಮಾಡಲಾಗಿದೆ. ಪ್ರತಿ ರಾಷ್ಟ್ರಧ್ವಜಕ್ಕೆ ರೂ. 25. 50 ದರ ನಿಗದಿಪಡಿಸಲಾಗಿದೆ. ಹರ್ ಘರ್ ತಿರಂಗಾ ಅಭಿಯಾನವು ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡುವಲ್ಲಿ, ಅತ್ಯಂತ ಪರಿಣಾಮಕಾರಿಯಾಗಲಿದ್ದು, ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ತಮ್ಮ ಮನೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಬೇಕು. ಜಿಲ್ಲೆಯಲ್ಲಿ ಈ ಅಭಿಯಾನವನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಮನವಿ ಮಾಡಿದ್ದಾರೆ.