Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜವಾವ್ದಾರಿಯುತ ಲೇಖಕನಿಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕು : ಡಾ.ಜಿ.ಎನ್. ಮಲ್ಲಿಕಾರ್ಜುನಪ್ಪ

Facebook
Twitter
Telegram
WhatsApp

ಚಿತ್ರದುರ್ಗ: ಸದ್ಯದ ದೇಶದ ಸ್ಥಿತಿಗಳನ್ನು ಅವಲೋಕಿಸುತ್ತಾ ಹೋದರೆ ಸ್ವಾತಂತ್ರ್ಯಪೂರ್ವ ವಸಾಹತು ಶಾಹಿ ಪದ್ಧತಿಗೆ ನಾವು ಜಾರುತ್ತಿದ್ದೇವೆ. ಇಂತಹ ಸ್ಥಿತಿಯಲ್ಲಿ ಸಾಮಾಜಿಕ ಹೊಣೆಗಾರಿಕೆ ಒಬ್ಬ ಸೃಜನಶೀಲ, ಜವಾಬ್ದಾರಿಯುತ ಲೇಖಕನಿಗರಿಬೇಕು ಎಂದು ಆರ್ಥಿಕ ತಜ್ಞ ಡಾ.ಜಿ.ಎನ್. ಮಲ್ಲಿಕಾರ್ಜುನಪ್ಪ ಅಭಿಪ್ರಾಯ ಪಟ್ಟರು.

ನಗರದ ಶಿವರಶರಣೆ ಹೇಮರೆಡ್ಡಿ ಮಲ್ಲಮ್ಮ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿತ್ರದುರ್ಗ ಹಾಗು ಮುಕ್ತವೇದಿಕೆ ಸಂಯುಕ್ತಾಶ್ರಯಲ್ಲಿ ಮಂಗಳವಾರ ನಡೆದ ಟಿ.ಎಸ್.ರಾಜೇಂದ್ರ ಪ್ರಸಾದ್ ತೇಕಲವಟ್ಟಿ ಅವರ ಸಾಹಿತ್ಯ ಕೃತಿಗಳ ಅವಲೋಕನ ಹಾಗು ಜಾನಪದ ತಜ್ಞ, ದಾವಣಗೆರೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‍ಗೆ ಭಾಜನರಾದ ಡಾ.ಮೀರಾಸಾಬಿಹಳ್ಳಿ ಶಿವಣ್ಣ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿಗಳನ್ನು ನಾವು ಗಮನಿಸಿದರೆ ಸ್ವಾತಂತ್ರ್ಯಪೂರ್ವ ವಸಾಹತು ಶಾಹಿಗೆ ನಾವು ಹೋಗುತ್ತಿದ್ದೇವೆ ಎನ್ನುವ ಭ್ರಮೆ ನಮ್ಮ ಸದಾ ಕಾಡುತ್ತಿದೆ. ಆ ಭ್ರಮೆ ಭ್ರಮೆಯಾಗೇ ಉಳಿದರೆ ಒಳಿತು. ಇಲ್ಲವಾದಲ್ಲಿ ಸಾಮಾನ್ಯನ ಬದುಕು ದುಸ್ತರವಾಗುತ್ತದೆ ಎಂದು ವಿಷಾದಿಸಿದರು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಮಾಜಿಕ ಹೊಣೆಗಾರಿಕೆಯುಳ್ಳ ಲೇಖಕನ ಜವಾಬ್ದಾರಿಯೆಂದರೆ, ಸಮಾಜಕ್ಕೆ ಹಿಡಿಯುವ ಕನ್ನಡಿ ಮತ್ತೊಂದು ಅಂತರಂಗಕ್ಕೆ ಹಿಡಿಯುವ ಕನ್ನಡಿಯಾಗಿದೆ.

ಸಮುದಾಯದ ಸಮಸ್ಯೆಗಳನ್ನು ಲೇಖಕ ತನ್ನ ಸಾಹಿತ್ಯದ ಮುಖೇನ ಪ್ರಸ್ತುತಪಡಿಸಬೇಕಾಗಿದೆ ಎಂದು ರಾಜೇಂದ್ರ ಪ್ರಸಾದ್ ಅವರ ಗದ್ಯಕೃತಿಗಳನ್ನು ಅವಲೋಕಿಸುತ್ತಾ ಹೇಳಿದರು.
ಪದ್ಯಕೃತಿಗಳನ್ನು ಅವಲೋಕನ ಮಾಡಿ ಮಾತನಾಡಿದ ಸಾಹಿತಿ ಡಾ.ಮೀರಾಸಾಬಿಹಳ್ಳಿ ಸಿ.ಶಿವಲಿಂಗಪ್ಪ, ಕಾವ್ಯವನ್ನು ಹಿಡಿಯಾಗಿ ಹೇಳುವುದು ಕಷ್ಟವಾಗುತ್ತದೆ. ಸುಮಾರು 1200ಕ್ಕೂ ಹೆಚ್ಚು ಕವನಗಳನ್ನು ಅವಲೋಕಿಸುವುದೆಂದರೆ ಸುಲಭದ ಮಾತಲ್ಲ. ಆದರೂ ಅವರ ಕಾವ್ಯಕೃತಿಗಳಲ್ಲಿ ಬಂಡಾಯ ಪ್ರಜ್ಞೆ, ಸಾಮಾಜಿಕ ಹೊಣೆಗಾರಿಕೆ, ತಳಸ್ಥರದ ಜೀವನ ಚಿತ್ರಣ ರಾಜೇಂದ್ರಪ್ರಸಾದ್ ಕಾವ್ಯಗಳಲ್ಲಿ ಕಂಡು ಬರುತ್ತದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕಲ್ಯಾಣಾಧಿಕಾರಿ ಡಾ.ರಂಗನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಆರ್ಥಿಕ ಚಿಂತಕ ಪ್ರೋ.ಲಿಂಗಪ್ಪ ಆಶಯ ನುಡಿಗಳನ್ನಾಡಿ, ಬರವಣಿಗೆ ಎನ್ನುವುದು ಜೀವ ದ್ರವ್ಯ, ಜೀವನದ ದ್ರವ್ಯವಾಗಬೇಕು. ಆ ಪಂಥ, ಈ ಪಂಥ ಎನ್ನದಲೆ ಮನುಷ್ಯ ಪಂಥದ ಅಂತಃಸತ್ವ ಲೇಖಕನಿಗಿರಬೇಕು ಅಂತಹ ಶಕ್ತಿ ರಾಜೇಂದ್ರಪ್ರಸಾದ್ ಕೃತಿಗಳಲ್ಲಿ ನಾವು ಕಾಣಬಹುದಾಗಿದೆ ಎಂದು ಅಭಿಪ್ರಾಯ  ವ್ಯಕ್ತಪಡಿಸಿದರು.
ಅಧ್ಯಕ್ಷತೆಯನ್ನು ಜಾನಪದ ತಜ್ಞ ಡಾ.ಮೀರಾಸಾಬಿಹಳ್ಳಿ ಶಿವಣ್ಣ ವಹಿಸಿದ್ದರು. ರಾಜೇಂದ್ರ ಪ್ರಸಾದ್ ಹಾಗು ಮೀರಾಸಾಬಿಹಳ್ಳಿ ಶಿವಣ್ಣನವರ ಅಭಿನಂದನಾ ನುಡಿಗಳನ್ನು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಪತ್ರಕರ್ತ ಉಜ್ಜಿನಪ್ಪ, ಮುಕ್ತವೇದಿಕೆಯ ಪ್ರೊ.ಜಿ.ಪರಮೇಶ್ವರಪ್ಪ, ಕಾರ್ಯಕ್ರಮವನ್ನು ಕುರಿತು ಮಾತನಾಡಿದರು ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿ ಕೆ.ಪಿ.ಎಂ.ಗಣೇಶಯ್ಯ, ಕೋಶಾಧ್ಯಕ್ಷ ಚೌಳೂರು ಲೋಕೇಶ್, ಹಿರಿಯೂರು ತಾಲ್ಲೂಕು ಕಸಾಪ ಅಧ್ಯಕ್ಷ ನಾಗೇಶ್, ಹೊಸದುರ್ಗ ಕಸಾಪ ಅಧ್ಯಕ್ಷ ಓಂಕಾರಪ್ಪ ಮತ್ತಿತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!