Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಚಿತ್ರದುರ್ಗದಲ್ಲಿ ಆಟೋ ಚಾಲಕರ ಪ್ರತಿಭಟನೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಆ.10) : ಹೊಸದಾಗಿ ಆಟೋಗಳಿಗೆ ಪರ್ಮಿಟ್ ನೀಡಬಾರದೆಂದು ನಗರ ಆಟೋ ಸಂಘಟನೆಗಳ ಒಕ್ಕೂಟದವರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಪರ್ಮಿಟ್ ಇಲ್ಲದೆ ನಗರದಲ್ಲಿ ಸಂಚರಿಸುತ್ತಿರುವ ಔಟ್ ಪರ್ಮಿಟ್ ಆಟೋಗಳನ್ನು ಹಿಡಿದು ಹಾಕಬೇಕು.
ಆಟೋ ಚಾಲಕರ ಸಂಘಟನೆಗಳು ನಿಗಧಿಪಡಿಸಿರುವ ಸ್ಥಳಗಳಿಗೆ ಆಟೋ ನಿಲ್ದಾಣಗಳನ್ನು ಕೂಡಲೆ ನಿರ್ಮಿಸಬೇಕು.
ಆಟೋ ಚಾಲಕರುಗಳಿಗಾಗಿಯೇ ನಿಗಮ ಮಂಡಳಿ ರಚನೆಯಾಗಬೇಕು.
ನಗರದಿಂದ ಸೀಟು ಹಾಕಿಕೊಂಡು ಹಳ್ಳಿಗಳಿಗೆ ಹೋಗುವುದು ನಿಲ್ಲಬೇಕು.
ಆಶ್ರಯ ಯೋಜನೆಯಡಿ ನಿರ್ಗತಿಕ ಆಟೋ ಚಾಲಕರುಗಳಿಗೆ ಕಡ್ಡಾಯವಾಗಿ ಮನೆಗಳನ್ನು ನಿರ್ಮಿಸಿಕೊಡಬೇಕು.
ನಗರ ಸಾರಿಗೆ ಬಸ್‍ಗಳಿಗೆ ಸಮಯ, ಸ್ಥಳವನ್ನು ನಿಗಧಿಪಡಿಸಬೇಕು ಎಂದು ಪ್ರತಿಭಟನಾನಿರತ ಆಟೋ ಚಾಲಕರುಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ಕಳೆದ ಇಪ್ಪತ್ತು ವರ್ಷಗಳಿಂದಲೂ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದರೂ ಪ್ರಯೋಜನವಾಗಿಲ್ಲ. ಇನ್ನು ಹದಿನೈದು ದಿನಗಳೊಳಗಾಗಿ ನಮ್ಮ ಎಲ್ಲಾ ಬೇಡಿಕೆಗಳು ಈಡೇರದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಆಟೋ ಚಾಲಕರುಗಳು ಗಡುವು ನೀಡಿದರು.
ವೀರೇಶ್, ರಾಜು, ಕೆ.ಎಂ.ಮಲ್ಲಿಕಾರ್ಜುನ, ಮಂಜುನಾಥ್ ಸೇರಿದಂತೆ ನೂರಾರು ಆಟೋ ಚಾಲಕರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment