Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ ಆಟೋರಿಕ್ಷಾ ದರಪರಿಷ್ಕರಣೆ : ಫೆ.1 ರಿಂದ 28 ರವರೆಗೆ ಆಟೋರಿಕ್ಷಾ ಮೀಟರ್‌ಗಳ ಸತ್ಯಾಪನೆ, ಮುದ್ರೆ ಕಾರ್ಯ

---Advertisement---

ಚಿತ್ರದುರ್ಗ,(ಜ.31) : 2023 ಜನವರಿ 23vರಂದು ರಂದು ಜರುಗಿದ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಆಟೋರಿಕ್ಷಾ ಪ್ರಯಾಣದರವನ್ನು ಮೊದಲ 1.5 ಕಿ.ಮೀ ಗೆ ರೂ.30/- ನಿಗಧಿಪಡಿಸಿ ನಂತರದ ಪ್ರತಿ 1 ಕಿಮೀ ಮತ್ತು ಭಾಗಶಃಕ್ಕೆ ರೂ.15/- ದರ ನಿಗಧಿಪಡಿಸಿ ಪರಿಷ್ಕರಿಸಲಾಗಿರುತ್ತದೆ.

ಪರಿಷ್ಕೃತ ದರಕ್ಕೆ ಅನುಗುಣವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆ ಅವರು 2023ರ ಫೆಬ್ರವರಿ 1 ರಿಂದ 28 ರವರೆಗೆ ಚಾಲ್ತಿ ಆಟೋರಿಕ್ಷಾಗಳಿಗೆ ಮೀಟರ್ ಸತ್ಯಾಪನೆ ಮತ್ತು ಮುದ್ರೆ ಮಾಡಿಕೊಡುವ ಕಾರ್ಯವನ್ನು ಬೆಳಿಗ್ಗೆ 7 ಗಂಟೆಗೆ ಚಿತ್ರದುರ್ಗದ ಹಳೇ ಬೆಂಗಳೂರು ರಸ್ತೆ(ಜೈಲುರಸ್ತೆ)ಯಲ್ಲಿ ಹಮ್ಮಿಕೊಳ್ಳಲಾಗಿದೆ.

ಆಟೋರಿಕ್ಷಾ ಚಾಲಕರು ತಮ್ಮ ವಾಹನಗಳಿಗೆ ನೂತನ ದರಕ್ಕೆ ಅನುಗುಣವಾಗಿ ಕಡ್ಡಾಯವಾಗಿ ಆಟೋರಿಕ್ಷಾ ಮೀಟರ್‌ಗಳ ಸತ್ಯಾಪನೆ ಮತ್ತು ಮುದ್ರೆ ಮಾಡಿಸಿಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...