Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರಸಭೆಯಿಂದ ಘನತ್ಯಾಜ್ಯ ನಿರ್ವಹಣೆ ಹಾಗೂ ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ

---Advertisement---

 

ಚಿತ್ರದುರ್ಗ. ಸೆ.23: ಚಿತ್ರದುರ್ಗನಗರಸಭೆ ಹಾಗೂ ಐ.ಐ.ಎಚ್.ಎಸ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಗರಸಭೆಯ ಪೌರಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಸೋಮವಾರ ಘನತ್ಯಾಜ್ಯ ನಿರ್ವಹಣೆ ಮತ್ತು ನೈರ್ಮಲ್ಯದ ಕುರಿತು ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಹಸಿಕಸ ಮತ್ತು ಒಣಕಸ ಬೇರ್ಪಡಿಸುವ ವಿಧಾನಗಳ ಕುರಿತು ಐ.ಐ.ಎಚ್.ಎಸ್ ಸಂಸ್ಥೆಯ ವತಿಯಿಂದ ತರಬೇತಿ ನೀಡಲಾಯಿತು.

ತದನಂತರ ನಗರದ ಆಜಾದ್ ನಗರ, ಹೊರಪೇಟೆ, ಹಾಗೂ ಅಂಜುಮನ್ ಸರ್ಕಲ್ ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಘನತ್ಯಾಜ್ಯ ನಿರ್ವಹಣಾ ನಿಯಮಗಳು 2026ರ ಪ್ರಕಾರ ನಾಲ್ಕು ವಿಧದ ಕಸವನ್ನು (ಹಸಿ, ಒಣ, ಅಪಾಯಕಾರಿ ಹಾಗೂ ನೈರ್ಮಲ್ಯ ತ್ಯಾಜ್ಯ) ವಿಂಗಡಿಸಿ ನೀಡುವಂತೆ ವಿವರಿಸಿ ಅರಿವು ಮೂಡಿಸಲಾಯಿತು.

ತರಕಾರಿ ಮಾರುಕಟ್ಟೆಯಲ್ಲಿ ಸೌಂದರ್ಯೀಕರಣ: ನಗರಸಭೆ ವ್ಯಾಪ್ತಿಯ ತರಕಾರಿ ಮಾರುಕಟ್ಟೆಯಲ್ಲಿದ್ದ ಬ್ಲಾಕ್ ಸ್ಪಾಟ್ (ಕಸದ ರಾಶಿ ಬೀಳುತ್ತಿದ್ದ ಜಾಗ) ಅನ್ನು ಪೌರಕಾರ್ಮಿಕರು ಮತ್ತು ಸಿಬ್ಬಂದಿ ಸ್ವಚ್ಛಗೊಳಿಸಿ, ರಂಗೋಲಿ ಬಿಡಿಸುವುದರ ಮೂಲಕ ಸೌಂದರ್ಯೀಕರಣಗೊಳಿಸಿದರು. ಇದೇ ವೇಳೆ ತರಕಾರಿ ಹಾಗೂ ಹೂವಿನ ಮಾರುಕಟ್ಟೆಯ ವ್ಯಾಪಾರಿಗಳಿಗೆ ಏಕಬಳಕೆ (ಸಿಂಗಲ್ ಯೂಸ್) ಪ್ಲಾಸ್ಟಿಕ್ ಬಳಸದಂತೆ ಸೂಚಿಸಲಾಯಿತು. ಜೊತೆಗೆ ಕಸವನ್ನು ಎಲ್ಲೆಂದರಲ್ಲಿ ಬಿಸಾಡದೆ, ವಿಂಗಡಿಸಿ ನಗರಸಭೆಯ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೇ ನೀಡಬೇಕೆಂದು ತಿಳುವಳಿಕೆ ನೀಡಲಾಯಿತು.
ಈ ಜಾಗೃತಿ ಅಭಿಯಾನದಲ್ಲಿ ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ) ಜಾಫರ್, ಹಿರಿಯ ಆರೋಗ್ಯ ನಿರೀಕ್ಷಕಿ ರುಕ್ಮಿಣಿ, ಕಿರಿಯ ಆರೋಗ್ಯ ನಿರೀಕ್ಷಕಿ ಹೀನಾ ಕೌಸರ್, ಐ.ಐ.ಎಚ್.ಎಸ್ ಸಂಸ್ಥೆಯ ವಿದ್ಯಾ, ಅಂಬರೀಶ್, ಯೋಗೇಶ್ ಹಾಗೂ ನಗರಸಭೆಯ ಕಮ್ಯೂನಿಟಿ ಮೊಬಿಲೈಜರ್‍ಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now