Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈಶ್ವರಪ್ಪ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಆಯನೂರು ಮಂಜುನಾಥ್..!

---Advertisement---

 

ಶಿವಮೊಗ್ಗ: ಮಾಜಿ ಸಚಿವ ಈಶ್ವರಪ್ಪ ಅವರಿಗೆ ಅಧಿಕಾರದ ಹಪಾಹಪಿ ಇದೆ. ಲಜ್ಜೆಗೆಟ್ಟು ಈಶ್ವರಪ್ಪ ಅವರು ತಮ್ಮ ಮಗನಿಗೆ ಟಿಕೆಟ್ ಕೇಳಿದ್ದಾರೆ ಅಂತ ಬಿಜೆಪಿ ಎಂಎಲ್ಸಿ ಆಯನೂರು ಮಂಜುನಾಥ್ ಹಿಗ್ಗಾಮುಗ್ಗಾ ಆಕ್ರೋಶ ಹೊರ ಹಾಕಿದ್ದಾರೆ.

ಆಯನೂರು ಮಂಜುನಾಥ್ ಇಂದು ಸುದ್ದಿಗೋಷ್ಟಿ ನಡೆಸಿ, ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಮ ಮಗನನ್ನು ಗೆಲ್ಲಿಸಿ, ನಿಮ್ಮ ಸಾಮರ್ಥ್ಯ ತೋರಿಸಿ.‌ ನಿಮ್ಮ ಮಗ ಆಗಲಿ, ಬೇರೆ ಯಾರೇ ಆಗಲಿ ಅವರ ವಿರುದ್ಧ ನಾನು ಸ್ಪರ್ಧಿಸುತ್ತೇನೆ. ಬಿಜೆಪಿಯಲ್ಲಿ ಜೊತೆಗೆ ಕೆಲಸ ಮಾಡಿದವರಿಗೆ ಈಶ್ವರಪ್ಪ ಟಿಕೆಟ್ ಕೇಳಲಿಲ್ಲ. ಆದರೆ ಲಜ್ಜೆಗೆಟ್ಟವರಂತೆ ಮಗನಿಗೆ ಟಿಕೆಟ್ ಕೇಳುತ್ತಿದ್ದಾರೆ.

ಯಡಿಯೂರಪ್ಪ ಜೈಲಿಗೆ ಹೋಗಿದ್ದಾಗ ಲೇವಡಿ ಮಾಡಿದ್ದೀರಿ. ನಾನಾಗಿದ್ದರೆ ನೇಣು ಹಾಕಿಕೊಳ್ಳುತ್ತೀನಿ ಎಂದವರು ನೀವೂ. ನಿಮ್ಮ‌ ಮೇಲೆ‌ ಆರೋಪ ಬಂದಾಗ ನೇಣು ಹಾಕಿಕೊಳ್ಳಲೇ ಇಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾಗ, ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದಾಗ ಸ್ವಾಗತ ಮಾಡಲಿಲ್ಲ. ಮಂತ್ರಿಯಾಗಿದ್ದಾಗ ಸಂವಿಧಾನವನ್ನೇ ಅರ್ಥ ಮಾಡಿಕೊಳ್ಳಲಿಲ್ಲ. ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದೀರಿ, ಯಡಿಯೂರಪ್ಪ ವಿರುದ್ಧ ಹಗುರವಾಗಿ ಮಾತನಾಡಿದ್ದೀರಿ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...