Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರಾಗಿ ಆಯೇಷಾ ಖಾನಂ ಮತ್ತು ಸದಸ್ಯರಾಗಿ ಚಿತ್ರದುರ್ಗದ ಅಹೋಬಳಪತಿ ನೇಮಕ

---Advertisement---

 

 

ಸುದ್ದಿಒನ್, ಬೆಂಗಳೂರು, ಜುಲೈ. 10 : ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಇದರ ಜೊತೆಗೆ ಚಿತ್ರದುರ್ಗದ ಎಂ.ಎನ್. ಅಹೋಬಳಪತಿ ಹಾಗೂ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅಕಾಡೆಮಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ಜಿಲ್ಲೆಯ ಹಿರಿಯ ಪತ್ರಕರ್ತ ಎಂ.ಎನ್. ಅಹೋಬಳಪತಿ ಅವರು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಜಿಲ್ಲಾ ವಿಶೇಷ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಚಿತ್ರದುರ್ಗದಾದ್ಯಂತ ಜನಪರ ಹೋರಾಟಗಳನ್ನು ಮಾಡುತ್ತಾ, ಸಾಮಾಜಿಕ ಕಾಳಜಿಯ ಜೊತೆಗೆ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಸದಸ್ಯರನ್ನಾಗಿ ನೇಮಿಸಿದ್ದಕ್ಕೆ ಚಿತ್ರದುರ್ಗ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಯ ಮಾಧ್ಯಮ ಮಿತ್ರರು ಶುಭಕೋರಿ ಅಭಿನಂದಿಸಿದ್ದಾರೆ.

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರಿಗೆ ಮಾಧ್ಯಮಗಳಲ್ಲಿ 20 ವರ್ಷಕ್ಕಿಂತ ಹೆಚ್ಚು ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ದಿ ಏಷಿಯನ್​ ಏಜ್​, ಸ್ಟಾರ್​ ನ್ಯೂಸ್​, ಆಜ್​ ತಕ್​, ದೂರದ ದರ್ಶನದಲ್ಲಿ ಹೀಗೆ ವಿವಿಧ ಮಾಧ್ಯಮಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಈ ಬಾರಿ ಯಾರನ್ನು ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು.

ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎನ್ನುವುದು ಕೆ.ವಿ.ಪ್ರಭಾಕರ್ ಅವರ ಅಭಿಪ್ರಾಯವಾಗಿತ್ತು. ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ಸಿಎಂ ಸಿದ್ದರಾಮಯ್ಯ, ಇತರೆ ಹಲವು ಅರ್ಹರ ಹೆಸರುಗಳ ನಡುವೆ ಆಯೇಷಾ ಅವರನ್ನು ಹೆಚ್ಚು ಅರ್ಹರು ಎಂದು ತೀರ್ಮಾನಿಸಿ ಆದೇಶ ಹೊರಡಿಸಲು ಸೂಚಿಸಿದರು.

ಸಾಮಾಜಿಕ ನ್ಯಾಯದ ಜತೆಗೆ ಸೇವಾ ಹಿರಿತನ, ಅರ್ಹತೆ, ಸಾಮರ್ಥ್ಯಕ್ಕೆ ತಕ್ಕಂತೆ ಆದ್ಯತೆ ನೀಡಲಾಗಿದೆ. ಪತ್ರಿಕಾ ಛಾಯಾಗ್ರಾಹಕರನ್ನೂ ಮಾಧ್ಯಮ‌ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಪರಿಗಣಿಸಿರುವುದೂ ಕೂಡ ಇದೇ ಮೊದಲು. ಹಾಗೇ ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ವಿಶೇಷವಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...