Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯ ಫೋಟೋ ಬಿಡುಗಡೆ

Facebook
Twitter
Telegram
WhatsApp

ಸುದ್ದಿಒನ್ : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಭರದ ಸಿದ್ಧತೆ ನಡೆದಿದೆ. ರಾಮ್ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರೈ ಅವರು ಗರ್ಭಗುಡಿಯ ಫೋಟೋಗಳನ್ನು ಟ್ವಿಟರ್ (X) ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೊದಲ ಚಿತ್ರಗಳನ್ನು ಹಂಚಿಕೊಂಡ ಶ್ರೀ ರೈ ಅವರು ಹೀಗೆ ಬರೆದಿದ್ದಾರೆ: “ಭಗವಾನ್ ಶ್ರೀ ರಾಮಲಾಲಾ ಅವರ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ಇತ್ತೀಚೆಗೆ ಲೈಟಿಂಗ್-ಫಿಟ್ಟಿಂಗ್ ಕೆಲಸವೂ ಪೂರ್ಣಗೊಂಡಿದೆ. ಕೆಲವು ಛಾಯಾಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.”

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶುಕ್ರವಾರ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯ ಫೋಟೋ ಗಳನ್ನು  ಬಿಡುಗಡೆ ಮಾಡಿತು.

ಜನವರಿ 22ರಂದು ರಾಮ ಮಂದಿರದ ಉದ್ಘಾಟನಾ ಸಮಾರಂಭ ಅದ್ಧೂರಿಯಾಗಿ ನಡೆಯಲಿದೆ. ಪ್ರಾಣಪ್ರತಿಷ್ಠ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ವ್ಯವಸ್ಥೆ ಮಾಡಲಾಗುತ್ತಿದೆ.
ದಶಕಗಳ ಸಮಸ್ಯೆ ಕೊನೆಗೊಂಡಿದ್ದು, ಅಯೋಧ್ಯೆಯಲ್ಲಿ ದಿವ್ಯ ರಾಮ ಮಂದಿರ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡೆದಿದೆ. ಇದರೊಂದಿಗೆ ಉದ್ಘಾಟನಾ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಯುಪಿ ಸರ್ಕಾರ ಭಾರೀ ಸಿದ್ಧತೆ ನಡೆಸುತ್ತಿದೆ.

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವೇದ ಮಂತ್ರಗಳ ನಡುವೆ ಕಣ್ಣುಗಳ ಹಬ್ಬವಾಗಿರುವ ಭಗವಾನ್ ಶ್ರೀ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.
ಇದಲ್ಲದೆ, ಈ ಕಾರ್ಯಕ್ರಮಕ್ಕೆ ದೇಶದ 8 ಸಾವಿರ ಸೆಲೆಬ್ರಿಟಿಗಳನ್ನು ಸಹ ಆಹ್ವಾನಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾಧ್ಯಮಗಳು ಸುಳ್ಳು, ದ್ವೇಷ ಬಿತ್ತುವ ಹಾಗೂ ಪೇಯ್ಡ್ ಸುದ್ದಿ ಪ್ರಕಟಿಸಬಾರದು : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಸುದ್ದಿಒನ್, ಚಿತ್ರದುರ್ಗ, ಫೆ.22 : ಮಾಧ್ಯಮಗಳು ತಮ್ಮ ಹೊಣೆಗಾರಿಕೆಯನ್ನು ಅರಿತು ಯಶಸ್ವಿಯಾಗಿ ಚುನಾವಣೆ ನಡೆಸಲು ಸಹಕಾರ ನೀಡಬೇಕು ಎಂದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣೆ ಅಧಿಕಾರಿ ಟಿ.ವೆಂಕಟೇಶ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ

ಕರ್ನಾಟಕದಲ್ಲೂ ಬಾಂಬೆ ಮಿಠಾಯಿ ನಿಷೇಧಕ್ಕೆ ನಿರ್ಧಾರ : ಅಷ್ಟಕ್ಕೂ ಮಿಠಾಯಿಯಲ್ಲಿರುವ ರೊಡಮೈನ್-ಬಿ ಎಷ್ಟು ಡೇಂಜರ್..?

    ಬಾಂಬೆ ಮಿಠಾಯಿ ಅಂದ್ರೆ ಸಾಕು ಬಾಯಲ್ಲಿ ನೀರು ಬರುವುದೇ ಹೆಚ್ಚು. ಮಕ್ಕಳಂತು ನಾಲಿಗೆಯನ್ನು ಪಿಂಕ್ ಮಾಡಿಕೊಂಡು ತಿಂದು ಖುಷಿ ಪಡುತ್ತಾರೆ. ಆದರೆ ಇಂಥ ತಿಂಡಿಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂದರೆ ಆತಂಕವಾಗುವುದಿಲ್ಲವೆ.

ಬಿಜೆಪಿಯಿಂದ ಕಾಂಗ್ರೆಸ್ ನತ್ತ ಹೊರಟ ಮುದ್ದಹನುಮೇಗೌಡ..!

    ತುಮಕೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಭರ್ಜರಿ ಪ್ರಚಾರವೂ ಜೋರಾಗಿದೆ. ಮೂರು ಪಕ್ಷಗಳು ಚುನಾವಣೆಯ ಸಿದ್ಧತೆ ನಡೆಸಿಕೊಂಡಿದ್ದಾರೆ. ಈ ಬಾರಿ ಕಾಂಗ್ರೆಸ್ ಮೈತ್ರಿ ಪಕ್ಷವನ್ನು ಎದುರಿಸಬೇಕಿದೆ, ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕಾಂಗ್ರೆಸ್

error: Content is protected !!