ಸುದ್ದಿಒನ್, ಚಿತ್ರದುರ್ಗ, ಜನವರಿ.22 : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಈ ಸುಂದರ ಗಳಿಗೆಯನ್ನು ಇಡೀ ದೇಶದ ಹಿಂದೂಗಳು ಭಕ್ತಿ ಭಾವದಿಂದ ಆಚರಣೆ ಮಾಡುತ್ತಿದ್ದಾರೆ. ಈ ದಿನಕ್ಕಾಗಿ ಅದೆಷ್ಟೋ ವರ್ಷಗಳಿಂದ ಕಾಯುತ್ತಿದ್ದಾರೆ. ಹೀಗಾಗಿ ಈ ವಿಶೇಷ ದಿನದಂದು ಅದೆಷ್ಟೋ ಗರ್ಭಿಣಿಯರು ಇಂದೇ ಡೆಲಿವರಿ ಮಾಡಿಸಲು ಮನವಿ ಮಾಡಿದ್ದಾರೆ. ಇದರ ಜೊತೆಗೆ ಮಕ್ಕಳಿಗೆ ನಾಮಕರಣವನ್ನು ಇಂದೇ ಮಾಡುತ್ತಿದ್ದಾರೆ. ಅದರಲ್ಲೂ ಮಕ್ಕಳಿಗೆ ಶ್ರೀ ರಾಮ ಎಂಬ ಹೆಸರನ್ನೇ ಇಡುತ್ತಿದ್ದಾರೆ.
ದೇಶದಾದ್ಯಂತ ಸಂಭ್ರಮಾಚರಣೆ ಜೋರಾಗಿದೆ. ವಿಶೇಷ ಪೂಜೆ, ಭಜನೆ, ಮಂತ್ರ ಪಠಣ, ಪ್ರಸಾದ ವಿತರಣೆ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯುತ್ತಿವೆ.
ಇತ್ತ ಚಿತ್ರದುರ್ಗದಲ್ಲೂ ವಿಶೇಷ ಕಾರ್ಯಕ್ರಮವೊಂದು ನಡೆಯಿತು.
ಅತ್ತ ಶ್ರೀ ರಾಮಮಂದಿರದಲ್ಲಿ ಬಾಲರಾಮನಿಗೆ ಪ್ರಾಣ ಪ್ರತಿಷ್ಟಾಪನೆಯ ಶುಭ ಮುಹೂರ್ತದ ಸಮಯ 12 ಗಂಟೆ 29 ನಿಮಿಷ 8 ಸೆಕೆಂಡುಗಳಿಂದ 12 ಗಂಟೆ 30 ನಿಮಿಷ 32 ಸೆಕೆಂಡುಗಳ ವರೆಗೂ ಇರುವ 84 ಸೆಕೆಂಡುಗಳ ಅಭಿಜಿತ್ ಮುಹೂರ್ತದಲ್ಲಿ ನೆರವೇರಿದ ಇದೇ ಶುಭ ಮುಹೂರ್ತದಲ್ಲಿ ಶ್ರೀಮತಿ ಭಾವನ ಮತ್ತು ಸಾಗರ್ ದಂಪತಿಗಳು ತಮ್ಮ ಮಗುವಿಗೆ ಶ್ರೀ ರಾಮ್ ಎಂದು ನಾಮಕರಣ ಮಾಡಿದರು.
ನಗರದ ಸಾಗರ್ ಅವರಿಗೆ ಭಾವನಾ ಎಂಬುವರೊಂದಿಗೆ ಮದುವೆಯಾಗಿದೆ. ಮದುವೆಯ ನಂತರ ಭಾವನಾ ಅವರು 2023, ಸೆಪ್ಟೆಂಬರ್ 22ರಂದು ಗುಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇಂದಿಗೆ ಮಗುವಿಗೆ 5 ತಿಂಗಳು ತುಂಬಿದ್ದು, ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಮಗುವಿಗೆ “ಶ್ರೀರಾಮ್” ಎಂದು ನಾಮಕರಣ ಮಾಡಿದ್ದಾರೆ. ತಂದೆ ಸಾಗರ್ ಮೆಡಿಕಲ್ ರೆಪ್ರೆಸೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪತ್ನಿ ಭಾವನಾ ಗೃಹಿಣಿಯಾಗಿದ್ದಾರೆ ಎನ್ನಲಾಗಿದೆ. ಇವರಿಬ್ಬರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಟಾಪನೆ ಮಳಿಗೆಯಲ್ಲಿಯೇ ಮಗುವಿಗೆ ಶಾಸ್ತ್ರೋಕ್ತವಾಗಿ ನಾಮಕರಣ ಮಾಡಿದರು.
ಇನ್ನು ಈ ಬಗ್ಗೆ ಮಾತನಾಡಿದ ಮಗುವಿನ ತಾಯಿ ಭಾವನ
ಸುದ್ದಿಒನ್ ನೊಂದಿಗೆ ಸಂಭ್ರಮ ಹಂಚಿಕೊಂಡರು.
ಇಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇಂದು ಒಳ್ಳೆಯ ದಿನವಾಗಿರುವುದರಿಂದ ಕುಟುಂಬದ ಸದಸ್ಯರು ತಿರ್ಮಾನ ಮಾಡಲಾಯಿತು. ಅಯೋಧ್ಯೆ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಜರುಗಿದ ಸಮಯದಲ್ಲಿ ಮಗನಿಗೆ ಶ್ರೀರಾಮ್ ಎಂದು ನಾಮಕರಣ ಮಾಡಲಾಯಿತು. ಮನೆಯಲ್ಲಿ ಸತ್ಯನಾರಾಯಣ ಪೂಜೆ ಸಲ್ಲಿಸಿ ನಾಮಕರಣ ಮಾಡಲಾಯಿತು. ಇದರಿಂದ ಮನೆಯಲ್ಲಿ ಎಲ್ಲರೂ ಖುಷಿಯಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು”.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…