ಚಿತ್ರದುರ್ಗ. ಫೆ.26: ಬೆಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದಿಕ್ ಕಾಲೇಜಿನ 2022ರ ಅಂತಿಮ ಬಿ.ಎ.ಎಂ.ಎಸ್ ನಲ್ಲಿ ಪಂಚಕರ್ಮ ವಿಷಯದಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ಹಿರಿಯೂರಿನ ಡಾ.ಸ್ನೇಹಾ ಬಂಗಾರ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 26 ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ. ಥಾವರ್‌ಚಂದ್ ಗೆಹೋಟ್ ಡಾ.ಸ್ನೇಹ ಇವರಿಗೆ ಬಂಗಾರದ ಪದಕ ನೀಡಿ ಗೌರವಿಸಲಿದ್ದಾರೆ.
ಡಾ. ಸ್ನೇಹ ಹಿರಿಯೂರಿನ ಮಾರುತಿ ನಗರದ ನಿವಾಸಿ ಗಣಿತ ಶಿಕ್ಷಕ ಕೆಂಚಲಿಂಗಪ್ಪ ಮತ್ತು ಲಕ್ಷ್ಮೀ ಇವರ ಪುತ್ರಿಯಾಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











