Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ಕೆ.ಹರಿಪ್ರಸಾದ್

---Advertisement---

ಬೆಂಗಳೂರು.ಜೂನ್.21: ಕಾಂಗ್ರೆಸ್‌ ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಇದುವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಧ್ವಜವನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡುವ ಮೂಲಕ ನಾಯಕತ್ವ ಬದಲಾವಣೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಇದರೊಂದಿಗೆ ಬಿ.ಕೆ. ಹರಿಪ್ರಸಾದ್ ಅವರು ರಾಜ್ಯ ಕಾಂಗ್ರೆಸ್ ಸಂಘಟನೆಯ ನೂತನ ಸಾರಥ್ಯವನ್ನು ಅಧಿಕೃತವಾಗಿ ವಹಿಸಿಕೊಂಡರು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಅನೇಕ ಹಿರಿಯ ನಾಯಕರು, ಶಾಸಕರು ಹಾಗೂ ಪ್ರಮುಖ ಮುಖಂಡರು ಭಾಗವಹಿಸಿ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.

 

Join WhatsApp

Join Now

Join Telegram

Join Now