ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 18 : ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ್ರ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕಿ ಬಿ.ಮಂಜುಳಾ ಆಯ್ಕೆಯಾಗಿದ್ದಾರೆ.
ಮಾ.20ರಿಂದ 25ರವರೆಗೆ ದೆಹಲಿಯ ಪಿತಾಂಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿರುವ ರಾಷ್ಟ್ರ್ರ ಮಟ್ಟದ ಸರ್ಕಾರಿ ನೌಕರರ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಕಳೆದ 2024-25ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ವಾಲಿಬಾಲ್ ಕ್ರೀಡಾಕೂಟದಲ್ಲಿ ವಾಲಿಬಾಲ್ ತಂಡದಲ್ಲಿ ಪ್ರತಿನಿಧಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಸತತ ಎರಡನೇ ಬಾರಿಗೆ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ವಾಲಿಬಾಲ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೊಸಮಾಳಿಗೆಯ ಗುತ್ತಿಗೆ ಬೋರಪ್ಪ ಮತ್ತು ದಿ.ವಿಜಯಮ್ಮ ದಂಪತಿಯ ಪುತ್ರಿಯಾದ ಬಿ.ಮಂಜುಳಾ ಅವರು, ಶಾಲಾ ದಿನಗಳಲ್ಲಿಯೇ ವಾಲಿಬಾಲ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿ 35ಕ್ಕೂ ರಾಜ್ಯ ಮಟ್ಟದ ವಾಲಿಬಾಲ್ ಚಾಂಪಿಯನ್, 4ಕ್ಕೂ ಹೆಚ್ಚು ರಾಷ್ಟ್ರ ಮಟ್ಟದ ಚಾಂಪಿಯನ್ ಸೇರಿದಂತೆ ಅನೇಕ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕಾರ್ಯನಿರ್ವಹಿಸುವ ಮೂಲಕ ಇಲಾಖಾ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಪ್ರಸ್ತುತ ಸತತವಾಗಿ ಎರಡನೇ ಬಾರಿಗೆ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ವಾಲಿಬಾಲ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯಿಂದ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ತೆರಳುತ್ತಿರುವ ಬಿ.ಮಂಜುಳಾ, ಶಿಕ್ಷಕ ತಿಮ್ಮಣ್ಣ, ವಿನಯ್, ಕಾಂತರಾಜ್ ಅವರಿಗೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ್ ಮುತ್ತಜ್ಜಿ, ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ರೇಣುಕಾಪ್ರಸಾದ್, ತಾಲೂಕು ವೈದ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಭರಮಸಾಗರ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪ್ರವೀಣ್‍ಕುಮಾರ್, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಪ್ರಸನ್ನಕುಮಾರ್, ಅರವಿಂದ್, ಪೂಜಾರ್‍ಗೌಡ, ಬಾಗೇಶ್ ಶಂಕರ್ ನಾಯಕ್, ದಯಾನಂದ್, ಮಹೇಶ್, ವಿಮಲ ಹಾಗೂ ಎಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









