Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡಗಳ ವಿಭಾಗದ ಅಧ್ಯಕ್ಷರಾಗಿ ಬಿ.ಮಂಜುನಾಥ್ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್.30 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‍ರವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ನಗರದ ರೈಲ್ವೆ ಸ್ಟೇಷನ್ ಸಮೀಪದ ವಾಸಿ ಬಿ.ಮಂಜುನಾಥ್ ಇವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಿ.ಮಂಜುನಾಥ್‍ಗೆ ನೇಮಕಾತಿ ಪತ್ರ ನೀಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಜಿಲ್ಲೆಯಾದ್ಯಂತ ಸಂಚರಿಸಿ ಪರಿಶಿಷ್ಟ ಪಂಗಡ ವಿಭಾಗವನ್ನು ಸಂಘಟಿಸಿ ಪಕ್ಷಕ್ಕೆ ಶಕ್ತಿ ತುಂಬುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಮುಂದೆ ನಡೆಯಲಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುವಂತೆ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಬಸವರಾಜ್, ಚಾಂದ್‍ಪೀರ್ ಇನ್ನು ಅನೇಕರು ಈ ಸಂರ್ದದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment