Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಬಿ.ಪಿ ಪಾಪೇಶ್ ಅವಿರೋಧ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜೂ.17 : ಚಿತ್ರದುರ್ಗ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ನಿರ್ದೇಶಕರಾಗಿ ಬಿ.ಪಿ ಪಾಪೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಂದು ರಿಟರ್ನಿಂಗ್ ಅಧಿಕಾರಿ ಎಸ್.ಸಂಜಯ್ ರಾಂ ತಿಳಿಸಿದ್ದಾರೆ.

ಚುನಾವಣಾ ದಿನಾಂಕದಿಂದ ಮುಂದಿನ ಐದು ವರ್ಷದ ಅವಧಿಗೆ ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿರುವ ಪಾಪೇಶ್ ಬಿಜೆಪಿ ಮುಖಂಡರಾಗಿದ್ದು, ಈ ಹಿಂದೆ ಮಾಜಿ ಸಚಿವ ಬಿ.ಶ್ರೀರಾಮುಲು ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದಾರೆ.

ಚಿತ್ರದುರ್ಗ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 12 ಜನ ನಿರ್ದೆಶಕರಾಗಿ ಆಯ್ಕೆಯಾಗ ಬಹುದಾಗಿದೆ ಇದರಲ್ಲಿ ಸಾಮಾನ್ಯ 5 ಸ್ಥಾನ, ಹಿಂದುಳಿದ ವರ್ಗ ಎ.1, ಹಿಂದುಳಿದ ವರ್ಗ ಬಿ.1, ಮಹಿಳಾ ಮೀಸಲು 02, ಪರಿಶಿಷ್ಟ ಜಾತಿ 01, ಪರಿಶಿಷ್ಟ ಪಂಗಡ 01, ಸಾಲಗಾರ ಇಲ್ಲದ ಕ್ಷೇತ್ರ 01 ಸ್ಥಾನ ಇದರಲ್ಲಿ ಮಹಿಳೆಯ ಎರಡು ಹಾಗೂ ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ 1 ಸೇರಿದಂತೆ ಒಟ್ಟು 03 ಜನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆ ನಡೆದಿದೆ ಉಳಿದ 9 ಸ್ಥಾನಕ್ಕೆ ಜೂನ್ 22ರ ಭಾನುವಾರದಂದು ಚುನಾವಣೆ ನಡೆಯಲಿದೆ. ಸುಮಾರು 900 ಜನ ಮತದಾರಿದ್ದಾರೆ.

ಡಿಸಿಸಿ ಬ್ಯಾಂಕ್‍ನ ನಿರ್ದೇಶಕರಾದ ನಿಶಾನಿ ಜಯ್ಯಣ್ಣ, ಹಿರಿಯ ಸಹಕಾರಿ ಈಶ್ವರಪ್ಪ, ಹೂವಿನ ತಿಪ್ಪಣ್ಣ, ಚಿತ್ರದುರ್ಗ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ನಾರಾಯಣಸ್ವಾಮಿ, ನಾಯಕ ಸಮಾಜದ ಡಿ.ಓ.ತಿಪ್ಪೇಸ್ವಾಮಿ, ರಂಗಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.

 

 

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment