ರಾಜಕೀಯ ಜೀವನದಲ್ಲಿ 50 ವರ್ಷ ಪೂರೈಸಿದ ಬಿ.ಎಸ್. ಯಡಿಯೂರಪ್ಪ ಅವರಿಗೆ ಚಿತ್ರದುರ್ಗದಲ್ಲಿ ಅಭಿನಂದನಾ ಸಮಾರಂಭ

1 Min Read

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 28 : ರಾಜಕೀಯ ಜೀವನದಲ್ಲಿ 50 ವಸಂತಗಳನ್ನು ಪೂರೈಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಅದ್ಧೂರಿಯಾಗಿ ಅಭಿನಂದನೆ ಸಲ್ಲಿಸಲು ಚಿತ್ರದುರ್ಗದಲ್ಲಿ ತಯಾರಿ ನಡೆಯುತ್ತಿದೆ. ಚಿತ್ರದುರ್ಗದಲ್ಲಿ ಸಮಾವೇಶವನ್ನು ಮೇ ತಿಂಗಳಿನಲ್ಲಿ ಆಯೋಜಿಸಲು ಸಿದ್ಧತೆ ನಡೆದಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಮಹಂತೇಶ ಕವಟಗಿ‌ಮಠ, ಬಿ.ಎಸ್‌.ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ. ಯಡಿಯೂರಪ್ಪ ಅವರು ಮಾಡಿದ ಕೆಲಸವನ್ನು ರಾಜ್ಯಕ್ಕೆ ಪರಿಚಯ ಮಾಡಬೇಕು ಎಂಬ ನಿಟ್ಟಿನಲ್ಲಿ ಮೇ ತಿಂಗಳಿನಲ್ಲಿ ಚಿತ್ರದುರ್ಗದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದಿದ್ದಾರೆ.

ನಾಡಿನ ಗಣ್ಯರೆಲ್ಲಾ ಸೇರಿ ಮೇ ತಿಂಗಳಲ್ಲಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ. ಕಾರ್ಯಕ್ರಮದ ರೂಪರೇಷೆ ಹೇಗೆ ಮಾಡಬೇಕು ಅನ್ನೋದನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಸಮಾರಂಭದಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಯಡಿಯೂರಪ್ಪ ಅವರ ಲಕ್ಷಾಂತರ ಅಭಿಮಾನಿಗಳು ಆಗಮಿಸಲಿದ್ದು, ಹರಗುರು ಪಂಚ ಪೀಠಾಧಿಪತಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.

ಸ್ವಾಗತ ಸಮಿತಿ ರಚಿಸಲಾಗಿದ್ದು, ಕೆಎಲ್‌ಇ ಮಾಜಿ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ ಅವರನ್ನು ಅಧ್ಯಕ್ಷರನ್ನಾಗಿ, ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾರ್ಯಾಧ್ಯಕ್ಷರನ್ನಾಗಿ, ಸಂಸದ ಗೋವಿಂದ ಕಾರಜೋಳ ಅವರನ್ನು ಗೌರವಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Share This Article