ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್
ಸುದ್ದಿಒನ್, ಚಿತ್ರದುರ್ಗ, (ಅ.30): ಹೃದಯಾಘಾತಕ್ಕೊಳಗಾಗಿ ಅಕಾಲಿಕ ನಿಧನಕ್ಕೆ ತುತ್ತಾಗಿರುವ ಯುವರತ್ನ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನದಿಂದ ಅಪಾರ ಅಭಿಮಾನಿಗಳು ಶೋಕಸಾಗರದಲ್ಲಿ ಮುಳುಗಿದ್ದು, ಚಿತ್ರರಂಗ ಒಬ್ಬ ಅಮೋಘ ನಟನನ್ನು ಕಳೆದುಕೊಂಡಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕಾರ್ಯದರ್ಶಿ ಬಿ.ಎ.ಲಿಂಗಾರೆಡ್ಡಿ ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಲ್ಲಿ ಪುನಿತ್‍ಗೆ ಸಂತಾಪ ಸೂಚಿಸಿ ಮಾತನಾಡಿದ ಬಿ.ಎ.ಲಿಂಗಾರೆಡ್ಡಿ ಚಿಕ್ಕವಯಸ್ಸಿನಲ್ಲಿಯೇ ಅಪಾರ ಅಭಿಮಾನಿಗಳ ಮನಗೆದ್ದ ಪುನಿತ್‍ರಾಜ್‍ಕುಮಾರ್ ಇಷ್ಟು ಬೇಗನೆ ಎಲ್ಲರನ್ನು ಅಗಲುತ್ತಾರೆಂದು ಯಾರು ಅಂದುಕೊಂಡಿರಲಿಲ್ಲ. ವಿಧಿಯಾಟದ ಮುಂದೆ ಎಲ್ಲರೂ ತಲೆಬಾಗಲೇಬೇಕು. ಹಾಗಾಗಿ ಪುನಿತ್‍ರವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.
ದುರ್ಗದಸಿರಿ ಕಲಾ ಸಂಘದ ಮಹಾಂತರೆಡ್ಡಿ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಚೇರ್ಮನ್ ವೈ.ಬಿ.ಮಹೇಂದ್ರನಾಥ್, ಸ್ಕೌಟ್ಸ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪಿ.ವೈ.ದೇವರಾಜ್ ಪ್ರಸಾದ್ ಸೇರಿದಂತೆ ಪುನೀತ್ ಅಪಾರ ಅಭಿಮಾನಿಗಳು ಶ್ರದ್ದಾಂಜಲಿ ಸಭೆಯಲ್ಲಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…