Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಯುಸಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಾತಿ ಆರಂಭ: ಆನ್‌ಲೈನ್ ಅರ್ಜಿ ಆಹ್ವಾನ

---Advertisement---

ಸುದ್ದಿಒನ್,ಬೆಂಗಳೂರು,ಮೇ.23: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಮೆಟ್ರಿಕ್-ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸೌಲಭ್ಯವು ಕೇವಲ ಪಿ.ಯು.ಸಿ (PUC) ಕೋರ್ಸ್‌ನ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸಲಿದೆ.

ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಸಮುದಾಯಗಳಿಗೆ ಸೇರಿದ ಪಿಯುಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.ಪ್ರವರ್ಗ-1, ಎಸ್.ಸಿ (SC) ಮತ್ತು ಎಸ್.ಟಿ (ST): ಗರಿಷ್ಠ ₹2.50 ಲಕ್ಷ ರೂಪಾಯಿಗಳು. ಪ್ರವರ್ಗ-2ಎ, 2ಬಿ, 3ಎ, 3ಬಿ: ಗರಿಷ್ಠ ₹1.00 ಲಕ್ಷ ರೂಪಾಯಿಗಳು.

ಆಸಕ್ತ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ಪೋರ್ಟಲ್ https://shp.karnataka.gov.in/bcwd ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.06.2026 ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ಪ್ರವೇಶಾತಿ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಮತ್ತು ಸರ್ಕಾರಿ ಆದೇಶಗಳ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅನ್ನು ವೀಕ್ಷಿಸಬಹುದು.

ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ವಿದ್ಯಾರ್ಥಿಗಳು bcwdhelpline@gmail.com ಗೆ ಇ-ಮೇಲ್ ಮಾಡಬಹುದು. ಅಥವಾ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ: 8050770004 ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ನಿಗದಿತ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಲು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now