Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಗಲಕೋಟೆ ಉಪಚುನಾವಣೆ: ಸತೀಶ್ ಜಾರಕಿಹೊಳಿ – ಬಿವೈ ವಿಜಯೇಂದ್ರಗೆ ಪ್ರತಿಷ್ಠೆಯ ಗೆಲುವು..!

---Advertisement---

ಬೆಂಗಳೂರು: ಬಾಗಲಕೋಟೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ – ಬಿಜೆಪಿ ಗೆಲುವಿಗಾಗಿ ಹಠ ತೊಟ್ಟಿದೆ. ಅಲ್ಲಿ ಹೆಚ್ಚಾಗಿ ಇರುವುದೇ ಲಿಂಗಾಯತ ಸಮುದಾಯದವರು. ಅದರಲ್ಲೂ 80 ಸಾವಿರ ಮತಗಳು ಲಿಂಗಾಯತರದ್ದಿದೆ. ಹೀಗಾಗಿ ಸತೀಶ್ ಜಾರಕಿಹೊಳಿ ಹಾಗೂ ಬಿವೈ ವಿಜಯೇಂದ್ರ ನಡುವೆ ಗೆಲುವಿನ ಸ್ಪರ್ಧೆ ಏರ್ಪಟ್ಟಿದೆ. ಯಾಕಂದ್ರೆ ಇಲ್ಲಿ ಗೆಲ್ಲದೆ ಹೋದರೆ ಲಿಂಗಾಯತ ಕ್ಷೇತ್ರವನ್ನೇ ಗೆಲ್ಲೋದಕ್ಕೆ ಆಗ್ಲಿಲ್ವಾ ಎಂಬ ಆರೋಪವನ್ನ ಎದುರಿಸಬೇಕಾಗುತ್ತದೆ.

ಎರಡು ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಈ ಬಾರಿ ಒಂದು ಕ್ಷೇತ್ರವನ್ನಾದರೂ ಗೆಲ್ಲಲೇಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ. ಕಳೆದ ಬಾರಿಯ ಉಪಚುನಾವಣೆಯಲ್ಲಿ ದೊಡ್ಡ ದೊಡ್ಡವರೇ ನಿಂತರು ಹೀನಾಯವಾಗಿ‌ ಸೋಲು ಕಂಡಿದ್ದರು. ಚನ್ನಪಟ್ಟಣದಲ್ಲಿ ನಿಖಿಲ್ ಅವರನ್ನು ಗೆಲ್ಲಿಸಿಕೊಂಡಿರಲಿಲ್ಲ, ಬಸವರಾಜ್ ಬೊಮ್ಮಾಯಿ ಅವರು ಶಿಗ್ಗಾವಿಯಲ್ಲಿ ಅವರ ಮಗನನ್ನು ಗೆಲ್ಲಿಸಿಕೊಂಡು ಬಂದಿರಲಿಲ್ಲ. ಇದೀಗ ಬಾಗಲಕೋಟೆಯಲ್ಲಿ ಗೆಲ್ಲಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಹೀಗಾಗಿಯೇ ಬಾಗಲಕೋಟೆಯಲ್ಲಿ ಗೆಲುವಿನ ಪ್ರತಿಷ್ಠೆಯಾಗಿದೆ.

ಇದು ಕೇವಲ ಸತೀಶ್ ಜಾರಕಿಹೊಳಿ ಹಾಗೂ ಬಿವೈ ವಿಜಯೇಂದ್ರ ಅವರಿಗೆ ಮಾತ್ರವಲ್ಲ ಸಿದ್ದರಾಮಯ್ಯ ಅವರಿಗೂ ಪ್ರತಿಷ್ಠೆಯ ಕಣವಾಗಿದೆ. ಕುರುಬ ಸಮುದಾಯದವರಿಗೆ ಟಿಕೆಟ್ ನೀಡಲಾಗಿದೆಮ ಮೇಟಿ ಅವರು ಸಿದ್ದರಾಮಯ್ಯ ಅವರ ಪರಮಾಪ್ತರಾಗಿದ್ದರು. ಅವರ ಕುಟುಂಬಕ್ಕೆ ನೀಡಲಾಗಿದೆ. ಹೀಗಾಗಿ ಗೆಲುವು ಬಹಳ ಮುಖ್ಯವಾಗಿದೆ. ಈ ಕ್ಷೇತ್ರವನ್ನು ಗೆಲ್ಲಿಸಲು ಸತೀಶ್ ಜಾರಕಿಹೊಳಿ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಬಿಜೆಪಿಯಲ್ಲಿ ವಿಜಯೇಂದ್ರ ಅವರಿಗೆ ಜವಾಬ್ದಾರಿ ಕೊಡಲಾಗಿದೆ. ಹೀಗಾಗಿ ಬಿಜೆಪಿಯ ವೀರಣ್ಣ ಚರಂತಿ ಮಠ ಅವರ ಗೆಲುವಿಗೆ ಸಾಕಷ್ಟು ರಣತಂತ್ರ ಹೆಣೆಯಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಗೆದ್ದರೆ ಬಿವೈ ವಿಜಯೇಂದ್ರ ಅವರ ಶಕ್ತಿ ಮತ್ತಷ್ಟು ಹೆಚ್ಚುತ್ತದೆ. ಈ ಕಾರಣದಿಂದ ಬಾಗಲಕೋಟೆ ಕ್ಷೇತ್ರ ಕುತೂಹಲಕಾರಿಯಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now