Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಪರ ಮತಯಾಚಿಸಿದ ಬಿಜೆಪಿ ಅಭ್ಯರ್ಥಿಯ ಸಹೋದರ..!

---Advertisement---

ಬಾಗಲಕೋಟೆ: ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಭರ್ಜರಿ ಮತಯಾಚನೆಯೂ ನಡೆಯುತ್ತಿದೆ. ಇದರ ನಡುವೆ ವಿಶೇಷವಾದ ಸಂಗತಿಯೊಂದು ನಡೆದಿದೆ. ಬಿಜೆಪಿ ಅಭ್ಯರ್ಥಿಯ ಸಹೋದರ ಕಾಂಗ್ರೆಸ್ ಪರವಾಗಿ ಮತಯಾಚನೆ ಮಾಡಿರೋದು. ಹೌದು ಮೇಟಿ ಅವರ ನಿಧನದ ಬಳಿಕ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ನಿಂದ ಉಮೇಶ್ ಮೇಟಿ ಹಾಗೂ ಬಿಜೆಪಿಯಿಂದ ವೀರಣ್ಣ ಚರಂತಿ ಮಠ ಅವರು ಸ್ಪರ್ಧೆ‌ ಮಾಡಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿ ಚರಂತಿ ಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಸಹೋದರ‌ರನ್ನು ಬಿಟ್ಟು ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡುತ್ತಿದ್ದಾರೆ.

 

ಸಿಎಂ ಸಿದ್ದರಾಮಯ್ಯ ಅವರು ಕೂಡ ಪ್ರಚಾರಕ್ಕೆ ಬರ್ತಾ ಇದ್ದಾರೆ. ಅವರು ಬಂದ್ರೆ ಇನ್ನು ಹೆಚ್ಚಿನ ಮತಗಳು ಬರಬಹುದು ಎಂಬ ನಿರೀಕ್ಷೆ ಇದೆ. ಮೇಟಿ ಅವರ ಮಗನ ಬಗ್ಗೆ ಕೂಡ ಎಲ್ಲರಿಗೂ ಒಲವಿದೆ. ಹೀಗಾಗಿ ಅವರೇ ಗೆಲ್ತಾರೆ ಎಂಬ ನಂಬಿಕೆಯೂ ಇದೆ. ನಾವೂ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ. ಬಿಜೆಪಿಯವರು ಏನು ಮಾಡದೆಯೇ ಡಂಗೂರ ಹೊಡೆದುಕೊಂಡು ಓಡಾಡ್ತಾರೆ. ನಾವ್ಯಾಕೆ ಮಾಡಿನೂ ಹೇಳಬಾರದು. ಜನನೇ ನಮಗೆ ವೋಟ್ ಹಾಕ್ತೀವಿ ಅಂತ ಹೇಳ್ತಾ ಇದ್ದಾರೆ. ನೀವೇನ್ ಬರ್ಬೇಡ್ರೀ ನಾವ್ ವೋಟ್ ಹಾಕ್ತೀವಿ ಅಂತಿದ್ದಾರೆ.

ಬಿಜೆಪಿಯವರು ಕೂಡ ವಂಶಪಾರಪರ್ಯವಾಗಿಯೇ ಟಿಕೆಟ್ ನೀಡ್ತಾರೆ. ಉತ್ತಮವಾದ ಲೀಡ್ ನಲ್ಲಿ ನಾವೂ ಗೆಲ್ಲುತ್ತೇವೆ ಎಂಬ ಮಾತನ್ನ ಮಲ್ಲಿಕಾರ್ಜುನ ಚರಂತಿಮಠ ಅವರು ಹೇಳಿದ್ದಾರೆ. ಅಣ್ಣ ಬಿಜೆಪಿಯಿಂದ ನಿಂತರೆ ತಮ್ಮ ಕಾಂಗ್ರೆಸ್ ಪಕ್ಷದಲ್ಲಿರುವ ಕಾರಣ, ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡ್ತಾ ಇದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...