Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಜ್ವಲ್ ಕೇಸಲ್ಲಿ ಸದ್ದು ಮಾಡಿದ್ದ ವಕೀಲ ದೇವರಾಜೇಗೌಡಗೆ ಜಾಮೀನು..!

Facebook
Twitter
Telegram
WhatsApp

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ಫೋಟೋ, ವಿಡಿಯೋಗಳು ಲೀಕ್ ವಿಷಯದಲ್ಲಿ ಸುದ್ದಿಯಲ್ಲಿದ್ದ ದೇವರಾಜೇಗೌಡ ಅವರಿಗೆ ಇದೀಗ ರಿಲೀಫ್ ಸಿಕ್ಕಿದೆ. ಕೋರ್ಟ್ ನಿಂದ ಜಾಮೀನು ಮಂಜೂರು ಆಗಿದೆ. ವಕೀಲ ದೇವರಾಜೇಗೌಡ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ಮಂಜೂರಾಗಿದೆ. ನ್ಯಾ.ಎಂ.ಜಿ ಉಮಾ ಅವರಿದ್ದ ಪೀಠದಿಂದ ಜಾಮೀನು ಸಿಕ್ಕಿದೆ.

 

ಹಳೆಯ ಕೇಸುಗಳೇ ದೇವರಾಜೇಗೌಡ ಅವರಿಗೆ ಮುಳುವಾಗಿತ್ತು. ಒಂದೊಂದೇ ಕೇಸುಗಳು ದಾಖಲಾಗಿದ್ದವು. ಅತ್ಯಾಚಾರ, ಜಾತಿ‌ನಿಂದನೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಲ್ಲಿಯೂ ದೂರು ದಾಖಲಾಗಿತ್ತು. ಮಾರ್ಚ್ 14 ರಂದು ಡಿಸಿ ದೂರು ನಿಡೀದ್ದರು. ದೂರಿನ ಆಧಾರದ ಮೇಲೆ ಹಾಸನದ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಂತ್ರಸ್ತೆ ದೂರಿನ ಮೇಲೆ ಅತ್ಯಾಚಾರ ಕೇಸಿನ ಮೇಲೆ ವಕೀಲ ದೇವರಾಜೇಗೌಡ ಪೊಲೀಸರ ಅತಿಥಿಯಾಗಿದ್ದರು. ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ದೇವರಾಜೇಗೌಡ ಅವರು ಇಷ್ಟು ದಿನ ಹಾಸನ ಜಿಲ್ಲಾ ಕಾರಾಗೃಹದಲ್ಲಿಯೇ ಇದ್ದರು. ಇನ್ನು ಎಂಟು ದಿನದಲ್ಲಿ ಜೈಲಿನಿಂದ ಹೊರಗೆ ಬರ್ತಿನಿ ಎಂದೇ ದೇವರಾಜೇಗೌಡ ಹೇಳಿದ್ದರು. ಅದರಂತೆ ಇದೀಗ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸಿನಲ್ಲಿ ದೇವರಾಜೇಗೌಡರ ಹೆಸರು ಜೋರು ಸದ್ದು ಮಾಡಿತ್ತು. ಡ್ರೈವರ್ ಕಾರ್ತಿಕ್ ಮೇಲೆ ದೇವರಾಜೇಗೌಡ ಆರೋಪ ಮಾಡಿದ್ದರೆ, ಡ್ರೈವರ್ ಕಾರ್ತಿಕ್, ಪುನಃ ದೇವರಾಜೇಗೌಡರ ಮೇಲೆ ಆರೋಪಿಸಿದ್ದರು. ಫೋಟೋ, ವಿಡಿಯೋಗಳನ್ನು ಅವರಿಗೆ ಬಿಟ್ಟರೆ ಇನ್ಯಾರಿಗೂ ನಾನು ಕೊಟ್ಟಿಲ್ಲ ಎಂದಿದ್ದರು. ವಕೀಲ ದೇವರಾಜೇಗೌಡ ಈ ಪ್ರಕತಣದಲ್ಲಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎಂದು ಆರೋಪಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ಯಾರಂಟಿ ಯೋಜನೆಗಳನ್ನು ಶೇ.100ರಷ್ಟು ಅನುಷ್ಠಾನ ಮಾಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ. ಜುಲೈ.03:  ಜಿಲ್ಲೆಯಲ್ಲಿ ದುರಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೆ ಸರಿಪಡಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ

ಹಾಸ್ಟೆಲ್ ಪ್ರವೇಶ ವಿಳಂಬ : ಚಿತ್ರದುರ್ಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 03 : ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನವನ್ನು

ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ

ಚಿತ್ರದುರ್ಗ. ಜುಲೈ.03:   ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಸರ್ಕಾರದ ಒಂದು ಪ್ರತಿಷ್ಠಿತ ಸಂಸ್ಥೆಯಾಗಿದ್ದು, ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆಗೆ ಹೆಸರುವಾಸಿಯಾದ ಆಸ್ಪತ್ರೆಯಾಗಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳ ಹಾಗೂ ಹೊರ ರಾಜ್ಯಗಳ ಸಾರ್ವಜನಿಕರು ಕ್ಯಾನ್ಸರ್ ಚಿಕಿತ್ಸೆಗೆ ಕಿದ್ವಾಯಿ

error: Content is protected !!