ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ದ ಭಜರಂಗದಳ ಗರಂ : ಕಾರಣವೇನು ಗೊತ್ತಾ..?

1 Min Read

 

 

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಮಂಗಳೂರಿನ ಘಟನೆಯೊಂದರ ಬಗ್ಗೆ ಮಾತನಾಡಿದ್ದರು. ನಾನು ಗೃಹ ಸಚಿವನಾಗಿದ್ದಾಗ ಮಂಗಳೂರಿನ ಘಟನೆಯ ಸಂಧರ್ಭದಲ್ಲಿ ಎಷ್ಟೇ ಒತ್ತಡವಿದ್ದರು, ಮುಲಾಜಿಲ್ಲದೆ ಒದ್ದು ಒಳಗೆ ಹಾಕಿದ್ದೆ ಎಂಬುದಾಗಿ ಹೇಳಿದ್ದರು. ಈ ವಿಚಾರವಾಗಿ ಭಜರಂಗದಳ ಆಕ್ರೋಶಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಭಜರಂಗದಳದ ಸಹ ಸಂಯೋಜಕ ಪುನೀತ್ ಅತ್ತಾವರ್ ಆಕ್ರೋಶ ಹೊರ ಹಾಕಿದ್ದಾರೆ.

 

ನೀವು ಆರ್ ಅಶೋಕ್ ಅಲ್ಲ..ನಿಮ್ಮ ಹೆಸರನ್ನು ಎ. ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜೆಸ್ಟ್‌ಮೆಂಟ್ ಅಶೋಕ್ ಅವರೇ..! ನಿಮ್ಮ ನಾಲಗೆಯನ್ನು ನಾಲಗೆ ರೀತಿಯನ್ನು ಬಳಸಿ ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜೆಸ್ಟ್‌ಮೆಂಟ್ ರಾಜಕಾರಣ ಎಂಬ ಗೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ. ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ.

 

ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳಿ. ಪ್ರತಿಪಕ್ಷ ನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಪುನೀತ್ ಅತ್ತಾವರ ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *