Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಬಕ್ರಿದ್ ಹಬ್ಬ : ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 07 : ತ್ಯಾಗ ಬಲಿದಾನಗಳ ಸಂಕೇತ ಬಕ್ರಿದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ದಾವಣಗೆರೆ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಶನಿವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಎಂಟು ಗಂಟೆಗೆ ಈದ್ಗಾ ಮೈದಾನದಲ್ಲಿ ಜಮಾವಣೆಗೊಂಡ ಮುಸ್ಲಿಂರು ಸಕಲ ಜೀವರಾಶಿಗಳಿಗೂ ಸುಖ, ಶಾಂತಿ ಕರುಣಿಸಿ ಸಮೃದ್ದವಾಗಿ ಮಳೆ ಬೆಳೆ ನೀಡಿ ರೈತಾಪಿ ವರ್ಗಕ್ಕೆ ನೆಮ್ಮದಿ ಸಿಗಲಿ ಎಂದು ಅಲ್ಲಾನಲ್ಲಿ ಪ್ರಾರ್ಥಿಸಿದರು.

ಶ್ವೇತ ವಸ್ತ್ರಧಾರಿಗಳಾಗಿದ್ದ ಮುಸ್ಲಿಂರು ತಲೆ ಮೇಲೆ ಬಿಳಿ ಟೋಪಿಗಳನ್ನು ಧರಿಸಿ ಪ್ರಾರ್ಥನೆಯಲ್ಲಿ ತೊಡಗಿದರೆ. ಇನ್ನು ಕೆಲವರು ಕರವಸ್ತ್ರವನ್ನು ತಲೆಗೆ ಸುತ್ತಿಕೊಂಡಿದ್ದರು. ಮನೆಯಿಂದಲೆ ಚಾಪೆ, ಜಮಕಾನ ತೆಗೆದುಕೊಂಡು ಮೈದಾನದಲ್ಲಿ ಹಾಸಿಕೊಂಡು ಪ್ರಾರ್ಥಿಸಿದರು. ಮಕ್ಕಳಿಂದ ಹಿಡಿದು ದೊಡ್ಡವರು ಪ್ರಾರ್ಥನೆಯಲ್ಲಿ ತೊಡಗಿ ಶ್ರದ್ದಾ ಭಕ್ತಿಯನ್ನು ಸಮರ್ಪಿಸಿದರು. ಗಾಂಧಿವೃತ್ತದ ನಾಲ್ಕು ಕಡೆಗಳಲ್ಲಿಯೂ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಸುಗಮ ವ್ಯವಸ್ಥೆ ಕಲ್ಪಿಸಲಾಗಿತ್ತು. ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮೀಪ ಹಾಗೂ ದಾವಣಗೆರೆ ರಸ್ತೆಯ ಸಂಚಾರಿ ಪೊಲೀಸ್ ರಾಣೆ ಹತ್ತಿರ ರಸ್ತೆಗೆ ಬ್ಯಾರಿಕೇಡ್‍ಗಳನ್ನಿಟ್ಟು ವಾಹನಗಳ ಸಂಚಾರವನ್ನು ನಿಯಂತ್ರಿಸಲಾಯಿತು.

ವಕ್ಫ್ ಮಂಡಳಿ ಮಾಜಿ ಚೇರ್ಮನ್ ಇಕ್ಬಾಲ್ ಹುಸೇನ್, ನಗರಸಭೆ ಮಾಜಿ ಉಪಾಧ್ಯಕ್ಷ ಸೈಯದ್ ಅಲ್ಲಾಭಕ್ಷಿ, ಮುಸ್ಲಿಂ ಮುಖಂಡರುಗಳಾದ ಟಿಪ್ಪುಖಾಸಿಂ ಆಲಿ, ಅಬ್ದುಲ್ಲಾ
ಚಾಂದ್‍ಪೀರ್, ಎಂ.ಕೆ.ತಾಜ್‍ಪೀರ್, ಜಮೀರ್, ಜಾಮಿಯಾ ಮಸೀದಿ ಮುತುವಲ್ಲಿ ಸಾಧಿಕ್ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಮುಸ್ಲಿಂರು ಪ್ರಾರ್ಥನೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...