ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಜೂನ್. 26 : ಇತ್ತೀಚೆಗೆ ಭೀಕರವಾಗಿ ಹತ್ಯೆ ಆಗಿರುವ ರೇಣುಕಸ್ವಾಮಿ ಅವರ ಮನೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಜಗದ್ಗುರುಗಳು ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ರೇಣುಕಸ್ವಾಮಿ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕು ಜೊತೆಗೆ ಆತನ ಪತ್ನಿಗೆ ಸರಕಾರಿ ಉದ್ಯೋಗ ನೀಡಬೇಕು. ಗೃಹ ಸಚಿವರಾಗಲಿ ಮುಖ್ಯ ಮಂತ್ರಿಗಳಾಗಲಿ ಕುಟುಂದವರನ್ನು ಭೇಟಿ ಮಾಡಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರಲ್ಲದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮೃತ ರೇಣುಕಸ್ವಾಮಿ ತಂದೆ ಕಾಶಿನಾಥಸ್ವಾಮಿ ಶಿವನಗೌಡರು ತಾಯಿ ರತ್ನಪ್ರಭಾ ಹಾಗೂ ಅವರ ಕುಟುಂಬದವರು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್