Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪದವಿ ಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ : ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

---Advertisement---

ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರವೊಂದು ಹೊರ ಬಿದ್ದಿದೆ. ಅದರಲ್ಲೂ ಪದವಿ ಪೂರ್ವ ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಮಾಡುವುದಕ್ಕೆ ಇಲಾಖೆ ನಿರ್ಧಾರ ಮಾಡಿದೆ. ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಬೆನ್ನಲ್ಲೇ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ನಿರ್ಧಾರಕ್ಕೆ ಬಂದಿದ್ದಾರೆ.

ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಪರೀಕ್ಷೆ ಸಮಯದಲ್ಲಿ ಶಿಕ್ಷಕರಿಗೂ ಮೊಬೈಲ್ ನಿಷೇಧ ಮಾಡುವುದಕ್ಕೆ ಹೊರಟಿದೆ. ಕ್ಯಾಂಪಸ್ ಒಳಗೂ ವಿದ್ಯಾರ್ಥಿಗಳು ಮೊಬೈಲ್ ಬಳಸುವಂತಿಲ್ಲ ಎಂಬ ಸೂಚನೆಯನ್ನ ತಿಳಿಸಿದೆ. ಮುಂದೆ ರಾಜ್ಯ ಮಟ್ಟದ ಪರೀಕ್ಷೆಗೆ ಮತ್ತಷ್ಟು ಕಠಿಣವಾದ ನಿಯಮಗಳನ್ನು ತರುವುದಕ್ಕೆ ಎಲ್ಲಾ ರೀತಿಯ ಪ್ಲ್ಯಾನ್ ರೂಪಿಸಲಾಗಿದೆ. ಜನವರಿ 27ರಿಂದ 2ನೇ ಹಂತದ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್ ಆದ್ಮೇಲೆ ಬಿಜೆಪಿ ನಾಯಕರು ಕಿಡಿಕಾರಿದ್ದರು‌. ಇದು ಸಿಎಂ ಗಮನಕ್ಕೂ ಬಂದಿತ್ತು. ಬಳಿಕ ಮುಂದಿನ ದಿನಗಳಲ್ಲಿ ನಡೆಯುವ ಪರೀಕ್ಷೆಗಳನ್ನು ಬಹಳ ಕಟ್ಟುನಿಟ್ಟಿನಿಂದ ನಡೆಸಬೇಕು. ಆರಂಭದಲ್ಲಿಯೇ ನಡೆಯುವ ಪರೀಕ್ಷೆಗಳು ಈ ರೀತಿ ಆಗಿ ಬಿಟ್ಟರೆ ಪೋಷಕರಿಗೂ ಆತಂಕವಾಗುತ್ತದೆ ಎಂಬ ಚರ್ಚೆಗಳು ನಡೆದಿದ್ದವು. ಹೀಗಾಗಿ ಶಿಕ್ಷಣ ಇಲಾಖೆ ಸಾಧ್ಯವಾದಷ್ಟು ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲು ನಿರ್ಧಾರ ಮಾಡಿದೆ. ಪ್ರಮುಖವಾಗಿ ಕೈಗೊಳ್ಳಬೇಕಾದಂತ ಮಾರ್ಗದರ್ಶನಗಳು ಕೂಡ ಇಲಾಖೆಗೆ ರವಾನೆಯಾಗಿದೆ. ಇದೆ ನಡುವೆ ಶಿಕ್ಷಣ ಇಲಾಖೆ ಕೂಡ ಬ್ಯಾಕ್ ಟು ಬ್ಯಾಕ್ ಸಭೆಯನ್ನು ನಡೆಸಿ, ಈ ಸಂಬಂಧ ಹಲವು ನಿರ್ಣಯಗಳನ್ನ ಕೈಗೊಂಡಿದ್ದಾರೆ. ಸದ್ಯಕ್ಕೆ ಮಕ್ಕಳು ಮೊಬೈಲ್ ನಿಂದ ಮಕ್ಕಳನ್ನು ದೂರವಿಡುವುದು ಮುಖ್ಯವಾಗಿದೆ. ಈ ನಿರ್ಧಾರದಿಂದಾದ್ರು ಮಕ್ಕಳ ಮೊಬೈಲ್ ಬಳಕೆ ಕಡಿಮೆಯಾಗಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...