ದಾವಣಗೆರೆ; ಜುಲೈ 23 : ಗಣೇಶ ಚತುರ್ಥಿ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಮಾರಾಟ ಮಾಡಿದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ರೂ.10.000-ಗಳ ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.








