ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ : ಡಿಸಿ ಜಿ.ಎಂ.ಗಂಗಾಧರಸ್ವಾಮಿ

1 Min Read

ದಾವಣಗೆರೆ. ಜೂನ್.20:  ದಾವಣಗೆರೆ ಜಿಲ್ಲೆಯು ರಾಜ್ಯದ ಮಧ್ಯಭಾಗದಲ್ಲಿದ್ದು, ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಾಕೃತಿಕ ಸುಂದರವಾದ ಪ್ರವಾಸಿ ತಾಣವನ್ನು ಒಳಗೊಂಡ ಏಷ್ಯಾದ 2ನೇ ಅತೀ ದೊಡ್ಡ ಮಾನವ ನಿರ್ಮಿತ ಶಾಂತಿಸಾಗರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರ ಅನುಕೂಲಕ್ಕಾಗಿ, ಪ್ರವಾಸೋದ್ಯಮ ಇಲಾಖೆಯಿಂದ ಉದ್ಯಾನವನ, ಪಾರ್ಕಿಂಗ್, ಬೋಟಿಂಗ್ ಸೌಲಭ್ಯ ಹಾಗೂ ವಾಣಿಜ್ಯ ಕೊಠಡಿ, ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಒಂದೆಡೆ ಪ್ರವಾಸಿಗರನ್ನು ಸೆಳೆಯುತ್ತಿರುವುದರಿಂದ ಪ್ರತಿ ದಿನ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಬೇಟಿ ನೀಡುತ್ತಾರೆ. ಇನ್ನೊಂದೆಡೆ ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ನೈಸರ್ಗಿಕ ವಾತಾವರಣ ಕಲುಷಿತಗೊಳ್ಳುತ್ತಿದೆ.

 

ಪ್ರವಾಸಿಗರು ನೀರಿನ ಬಾಟಲಿ, ಪಾನೀಯ ಬಾಟಲಿ, ಪ್ಲಾಸ್ಟಿಕ್ ಕವರ್, ಚಾಕಲೇಟ್ ಕವರ್, ಚಿಪ್ಸ್ ಪ್ಯಾಕೇಟ್ ಇತ್ಯಾದಿ ಏಕ ಬಳಕೆಯ ಪ್ಲಾಸ್ಟಿಕ್‍ಗಳನ್ನು ಕೆರೆಯಲ್ಲಿ ಮತ್ತು ಎಲ್ಲಂದರಲ್ಲಿ ಹಾಕುತ್ತಿರುವುದರಿಂದ ಕೆರೆ ಮತ್ತು ಪ್ರವಾಸಿ ಸ್ಥಳದ ಸುತ್ತಮುತ್ತಲಿನ ಪರಿಸರ ಹಾಳಾಗುತ್ತಿದೆ. ನೀರಿನಲ್ಲಿ ಹಾಕುವುದರಿಂದ ಜಲಚರಗಳಿಗೂ ಸಹ ಹಾನಿಯಾಗುತ್ತಿದೆ. ಅಲ್ಲದೇ ಪ್ರಸ್ತುತ ಈ ಕೆರೆಯ ನೀರನ್ನು ಬಹುಗ್ರಾಮ ಕುಡಿಯುವ ನೀರಿಗಾಗಿ ಸರಬರಾಜು ಮಾಡಲಾಗುತ್ತಿದೆ. ಇತ್ತೀಚೆಗೆ ಹೆಚ್ಚಾಗಿ ಬೇಟಿ ನೀಡುತ್ತಿರುವ ಪ್ರವಾಸಿಗರಿಂದ ಶಾಂತಿ ಸಾಗರದ ಪ್ರಾಚೀನ, ನೈಸರ್ಗಿಕ ಪರಿಸರವನ್ನು ಉಳಿಸಿಕೊಳ್ಳುವುದು ಮತ್ತು ಸಂರಕ್ಷಿಸುವುದು ಸವಾಲಿನ ಕಾರ್ಯವಾಗಿದೆ.

ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ಕಲ್ಪಿಸುವ ಉದ್ದೇಶದಿಂದ ಪ್ರವಾಸಿತಾಣ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ, ಶೌಚಾಲಯ ವ್ಯವಸ್ಥೆ ಹಾಗೂ ಕಸದಬುಟ್ಟಿಗಳನ್ನು ಕಲ್ಪಿಸಿಸುವ ಮೂಲಕ ಇದೇ ಜೂನ್ 18ಕ್ಕೆ ಅನ್ವಯವಾಗುವಂತೆ ಏಕಬಳಕೆಯ ಪ್ಲಾಸ್ಟಿಕ್‍ನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಪ್ರವಾಸಿ ತಾಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿದಲ್ಲಿ ರೂ.100 ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks