Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೈಕ್ಷಣಿಕ ಪ್ರವಾಸದಲ್ಲಿ ವಿದ್ಯಾರ್ಥಿಗಳ ರೀಲ್ಸ್, ಸೆಲ್ಫಿಗೆ ಬ್ರೇಕ್; ಕಾಲೇಜು ಶಿಕ್ಷಣ ಇಲಾಖೆ ಕಟ್ಟು ನಿಟ್ಟಿನ ಆದೇಶ

---Advertisement---

ಬೆಂಗಳೂರು: ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ರಾಜ್ಯ ಕಾಲೇಜು ಶಿಕ್ಷಣ ಇಲಾಖೆ, ಪ್ರವಾಸ ಸಂದರ್ಭದಲ್ಲಿ ಸೆಲ್ಫಿ ವಿಡಿಯೋ, ರೀಲ್ಸ್ ಸೇರಿದಂತೆ ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡುವುದಕ್ಕೆ ನಿರ್ಬಂಧ ವಿಧಿಸಿ ಕಟ್ಟು ನಿಟ್ಟಿನ ಸೂಚನೆ ನೀಡಿದೆ.ಕಾಲೇಜುಗಳು ಆಯೋಜಿಸುವ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಗಳು ಸೆಲ್ಫಿ, ರೀಲ್ಸ್ ಹಾಗೂ ವಿಡಿಯೋ ಚಿತ್ರೀಕರಣದಲ್ಲಿ ತೊಡಗುವುದರಿಂದ ಕೆಲವೆಡೆ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

ಕಾಲೇಜುಗಳು ಶೈಕ್ಷಣಿಕ ಪ್ರವಾಸ ಆಯೋಜಿಸುವ ಮುನ್ನ ಕಾಲೇಜು ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಪ್ರವಾಸಕ್ಕೆ ತೆರಳುವ ಪ್ರದೇಶ ಅಥವಾ ಪ್ರವಾಸಿ ತಾಣದ ವಿವರ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಮಾಹಿತಿ ಮತ್ತು ಬಳಸುವ ವಾಹನ ಸೇರಿದಂತೆ ಅಗತ್ಯ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸೆಲ್ಫಿ, ರೀಲ್ಸ್ ಮತ್ತು ಇತರೆ ವಿಡಿಯೋ ಚಿತ್ರೀಕರಣದಲ್ಲಿ ತೊಡಗುವುದನ್ನು ತಪ್ಪಿಸಬೇಕು. ಶೈಕ್ಷಣಿಕ ಪ್ರವಾಸದ ಮುಖ್ಯ ಉದ್ದೇಶ ಅಧ್ಯಯನವಾಗಿದ್ದು, ಮೊಬೈಲ್ ಚಿತ್ರೀಕರಣದಲ್ಲಿ ತೊಡಗುವುದರಿಂದ ವಿದ್ಯಾರ್ಥಿಗಳ ಗಮನ ಬೇರೆಡೆಗೆ ಹರಿಯುವುದಲ್ಲದೆ, ಸುರಕ್ಷತೆಗೂ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಗಳು ಇಲಾಖೆ ಸೂಚಿಸಿರುವ ನಿಯಮಗಳನ್ನು ಪಾಲಿಸುತ್ತಿರುವುದನ್ನು ಅಧ್ಯಾಪಕರು ಖಚಿತಪಡಿಸಿಕೊಳ್ಳಬೇಕು. ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶಿಸ್ತಿನ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ಸೂಚಿಸಲಾಗಿದೆ.ನಿಯಮಗಳನ್ನು ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ಪ್ರವಾಸದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕಾಲೇಜುಗಳಿಗೆ ಸೂಚಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now