Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೌರಿ-ಗಣೇಶ ಹಬ್ಬದ ಮೆರವಣಿಗೆಯಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ/ಸಿಡಿಮದ್ದು ಬಳಕೆ ನಿಷೇಧ: ಚಿತ್ರದುರ್ಗ ಜಿಲ್ಲಾಧಿಕಾರಿ ಆದೇಶ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 15 : ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆ ಮತ್ತು ಮೂರ್ತಿ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಪಟಾಕಿ/ಸಿಡಿಮದ್ದುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಚಿತ್ರದುರ್ಗ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ದಿನಾಂಕ: 14.09.2026 ರಂದು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಾಗುತ್ತದೆ. ಈ ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಪಟಾಕಿ/ಸಿಡಿಮದ್ದುಗಳನ್ನು ಸಿಡಿಸುವುದರಿಂದ ಮೆರವಣಿಗೆ ಮಾರ್ಗದಲ್ಲಿರುವ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ. ಅಲ್ಲದೆ ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ ಮತ್ತು ಮಕ್ಕಳಿಗೆ ತೊಂದರೆಯಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಸಾರ್ವಜನಿಕ ಶಾಂತಿ ಪಾಲನೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು, ಚಿತ್ರದುರ್ಗ ಜಿಲ್ಲೆ ರವರು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್) 2023ರ ಕಲಂ 163 ಹಾಗೂ ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 35, 36ರಡಿಯಲ್ಲಿ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ದಿನಾಂಕ: 14.09.2026 ರಿಂದ ದಿನಾಂಕ: 05.10.2026 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ದಿನಾಂಕ: 11.09.2026 ರಂದು ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ/ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ನಿಯಮ ಉಲ್ಲಂಘನೆ ಮಾಡುವುದು ಕಂಡು ಬಂದಲ್ಲಿ ಕಾನೂನು ಪ್ರಕಾರ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ ಜಿಲ್ಲೆಯಾದ್ಯಂತ ಡಿ.ಜೆ, ಹೈ-ಡೆಸಿಬಲ್ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ

ಚಿತ್ರದುರ್ಗ ಮುಖ್ಯ ರಸ್ತೆ ಅಗಲೀಕರಣ : ಭೂಸ್ವಾಧೀನ, ಕಟ್ಟಡ ಪರಿಹಾರದ ನಿಖರ ಮಾಹಿತಿ ಸಂಗ್ರಹಿಸಲು ಸಚಿವ ಟಿ. ರಘುಮೂರ್ತಿ ಸೂಚನೆ

ಗೋನೂರು ಕೆರೆಯಲ್ಲಿ ಭದ್ರೆಗೆ ಸಿಎಂ ಗಂಗಾಪೂಜೆ, ಬಾಗಿನ: ಅಗತ್ಯ ಸಿದ್ಧತೆಗೆ ಸಚಿವ ಟಿ. ರಘುಮೂರ್ತಿ ಸೂಚನೆ

ಕೆಲಸ ಮಾಡಲು ಇಷ್ಟವಿರದಿದ್ದರೆ ಬಿಟ್ಟುಬಿಡಿ : ಚಿತ್ರದುರ್ಗ ಜಿಲ್ಲಾಸ್ಪತ್ರೆ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಎಚ್ಚರಿಕೆ

ವಿದ್ಯಾ ನಗರದಲ್ಲಿ 18 ನೇ ವರ್ಷದ ಗಣೇಶೋತ್ಸವ : ‘ವಿ ಬಾಯ್ಸ್’ ವತಿಯಿಂದ ರಕ್ತದಾನ ಶಿಬಿರ: ಸಾರ್ಥಕತೆ ಮೆರೆದ ಯುವಪಡೆ.!

ವಕ್ಫ್ ಬೋರ್ಡ್‌ನ ಅಕ್ರಮ-ಅನ್ಯಾಯ ಸರಿಪಡಿಸಲು ಮುಸ್ಲಿಮರು ಒಗ್ಗಟ್ಟಾಗಲಿ: ಮುಜಾಹಿದ್ ಅಲಿ ಬಾಬ