Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿಒಪಿ ಮೂರ್ತಿಗಳ ಬಳಕೆ ನಿಷೇಧ : ಗೌರಿ-ಗಣೇಶ ಹಬ್ಬವನ್ನು ಸರ್ಕಾರದ ಮಾರ್ಗಸೂಚಿಯಂತೆ ಆಚರಿಸಿ ; ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ.

Facebook
Twitter
Telegram
WhatsApp

ಚಿತ್ರದುರ್ಗ,(ಸೆ.11) : ಜಿಲ್ಲೆಯಲ್ಲಿ ಈ ಬಾರಿ ಗಣೇಶ ಹಬ್ಬವನ್ನು ಸರ್ಕಾರದ ಮಾರ್ಗಸೂಚಿ ಪಾಲನೆಯೊಂದಿಗೆ ಭಕ್ತಿಪೂರ್ವಕ, ಸೌಹಾರ್ದಯುತ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವಂತಾಗಲು ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು, ಈ ನಿಟ್ಟಿನಲ್ಲಿ ಪಿಒಪಿ ಗಣೇಶ ಮೂರ್ತಿಗಳ ಬಳಕೆ ಬಗ್ಗೆ ನಿಗಾ ವಹಿಸಲು ವಿವಿಧ ಇಲಾಖೆ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಹೇಳಿದರು.

ಗೌರಿ-ಗಣೇಶ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ, ಕೋಮುಭಾವನೆಗಳಿಗೆ ಧಕ್ಕೆಯಾಗದಂತೆ ಶಾಂತಿ ಸೌಹಾರ್ದಯುತವಾಗಿ ಗಣೇಶ ಹಬ್ಬ ಆಚರಣೆ ಅನುವು ಮಾಡಿಕೊಡಬೇಕು.

ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಮತ್ತು ಲೋಹ ಮಿಶ್ರಿತ ಬಣ್ಣದಿಂದ ತಯಾರಿಸಿದ ವಿಗ್ರಹಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ಪರಿಸರಕ್ಕೆ ಹಾನಿಕಾರವಾಗುವ ಇಂತಹ ವಿಗ್ರಹಗಳ ಮಾರಾಟ ಹಾಗೂ ಬಳಕೆಗೆ ಅವಕಾಶ ನೀಡಬಾರದು.

ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ನಿಗಾ ವಹಿಸಿ, ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಹಾಗೂ ಬಳಕೆ ಕುರಿತಂತೆ ನಿಗಾ ವಹಿಸಿ, ಕ್ರಮ ಕೈಗೊಳ್ಳಲು ಪರಿಸರ ಅಧಿಕಾರಿಗಳು, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನು ಒಳಗೊಂಡಂತೆ ತಂಡವನ್ನು ರಚಿಸಲಾಗುವುದು.

ತಂಡವು ಜಿಲ್ಲೆಯಾದ್ಯಂತ ಸಂಚರಿಸಿ, ಜನರಲ್ಲಿ ಅರಿವು ಮೂಡಿಸಬೇಕು, ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಅಥವಾ ಬಳಕೆ ಕಂಡುಬಂದಲ್ಲಿ ಕೂಡಲೆ ಅದನ್ನು ವಶಪಡಿಸಿಕೊಳ್ಳಬೇಕು. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಬೇರೆ ಊರುಗಳಿಂದ ಮತ್ತು ರಾಜ್ಯಗಳಿಂದ ಸಾಗಾಣಿಕೆಯಾಗುವಂತಹ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ಚೆಕ್‍ಪೋಸ್ಟ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು.

ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸಬೇಕು, ಗಣೇಶಮೂರ್ತಿ ವಿಸರ್ಜನೆ ಮಾಡುವ ಸ್ಥಳಗಳ ಕುರಿತು ಸ್ಥಳೀಯವಾಗಿ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ನೀಡಬೇಕು,  ಪರಿಸರಕ್ಕೆ ಹಾನಿಯುಂಟು ಮಾಡುವ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜನೆಗೆ ಅವಕಾಶ ನೀಡಬಾರದು ಎಂದರು.

ಅಲ್ಲದೆ ಸಾರ್ವಜನಿಕರು ಪಿಒಪಿ ಹಾಗೂ ರಾಸಾಯನಿಕ ಮಿಶ್ರಿತ ಗಣೇಶ ಮೂರ್ತಿಗಳನ್ನು ಬಳಸದೆ, ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮತ್ತು ನೈಸರ್ಗಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಮಾತ್ರ ಬಳಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಅವರ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 1650 ಗಣೇಶ ಮೂರ್ತಿಗಳನ್ನು ಸಾರ್ವಜನಿಕವಾಗಿ ಸ್ಥಾಪಿಸುವ ಬಗ್ಗೆ ಮಾಹಿತಿ ಇದೆ.  ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸುವಂತಹ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟು ಅನುಮತಿ ಪಡೆದ ನಂತರವೇ ಸ್ಥಾಪಿಸಬೇಕಾಗುತ್ತದೆ.  ಗಣೇಶ ಮೂರ್ತಿ ಸ್ಥಾಪಿಸುವ ಮುನ್ನ ಎಲ್ಲ ಬಗೆಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಮೆರವಣಿಗೆ ಸಾಗುವ ಮಾರ್ಗಗಳನ್ನು ನಿಗದಿಪಡಿಸುವುದರ ಬಗ್ಗೆಯೂ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ವಿಗ್ರಹಗಳ ಸ್ಥಾಪನೆ ಅಥವಾ ವಿಸರ್ಜನೆ ಸಂದರ್ಭಕ್ಕೆ ಧ್ವನಿವರ್ಧಕಗಳಿಗೆ ಅನುಮತಿ ನೀಡುವ ಸಂದರ್ಭದಲ್ಲಿ, ಧ್ವನಿವರ್ಧಕಗಳು ನಿಯಮಗಳಿಗೆ ಅನುಗುಣವಾದ ಡೆಸಿಬಲ್ ನಷ್ಟು ಹೊಂದಿವೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು, ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಧ್ವನಿವರ್ಧಕಗಳ ಬಳಕೆಯನ್ನು  ನಿಷೇಧಿಸಲಾಗಿದ್ದು, ಹಗಲು ವೇಳೆ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ನಿಗದಿತ ಡೆಸಿಬಲ್ ಪ್ರಮಾಣದಲ್ಲಿ ಮಾತ್ರ ಧ್ವನಿವರ್ಧಕ ಬಳಕೆಗೆ ಅವಕಾಶವಿದೆ. ಪರಿಸರಕ್ಕೆ ಹಾನಿಕಾರಕವಾದ, ಹಾಗೂ ನಿಗದಿತ ಡೆಸಿಬಲ್ ಸೌಂಡ್ ಗಿಂತಲೂ ಹೆಚ್ಚಿನ ಸೌಂಡ್ ಹೊರಸೂಸುವ ಧ್ವನಿವರ್ಧಕಗಳಿಗೆ ಅನುಮತಿ ನೀಡಬಾರದು.  ಈ ಬಗ್ಗೆ ಸಂಬಂಧಪಟ್ಟವರಿಂದ ಅಧಿಕಾರಿಗಳು ಮುಚ್ಚಳಿಕೆ ಪತ್ರವನ್ನು ಪಡೆದುಕೊಳ್ಳಬೇಕು. ಗಣೇಶ ಮೂರ್ತಿ ಸ್ಥಾಪಿಸಿದ ನಂತರದ ಮೂರನೆ, ಐದನೇ ಹಾಗೂ ಒಂಭತ್ತನೆ ದಿನಗಳಂದು ವಿಸರ್ಜನೆಯಾಗುವ ಗಣೇಶ ಮೂರ್ತಿಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಮೆರವಣಿಗೆಗೆ ಸೂಕ್ತ ಮಾರ್ಗಗಳನ್ನು ರೂಪಿಸಬೇಕು.  ಮಾರ್ಗಗಳಲ್ಲಿ ಬ್ಯಾರಿಕೇಡಿಂಗ್, ಸಿಸಿ ಟಿ.ವಿ. ಗಳ ಅಳವಡಿಕೆ, ವಿಸರ್ಜನಾ ಸ್ಥಳಗಳಲ್ಲಿ ಸಾಕಷ್ಟು ವಿದ್ಯುತ್ ದೀಪದ ಅಳವಡಿಕೆಯನ್ನು ಮೊದಲೇ ಮಾಡಿಕೊಳ್ಳಬೇಕು, ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟಕ್ಕೆ ನಿಷೇಧ ಜಾರಿಗೊಳಿಸಬೇಕು, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕು ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಬಂಟಿಂಗ್, ಧ್ವಜಗಳ ಅಳವಡಿಕೆ ಕೇವಲ ವಿಸರ್ಜನೆ ದಿನಕ್ಕೆ ಮಾತ್ರ ಸೀಮಿತವಾಗಬೇಕು,  ಇದಕ್ಕೂ ಮುನ್ನವೇ ಅಳವಡಿಸಲು ಅವಕಾಶವಿಲ್ಲ.  ಗಣೇಶ ವಿಸರ್ಜನೆ ದಿನದಂದೇ ಸಂಬಂಧಿಸಿದ ಎಲ್ಲ ಬ್ಯಾನರ್, ಬಂಟಿಂಗ್ಸ್, ಧ್ವಜಗಳನ್ನು ಸಂಬಂಧಪಟ್ಟ ಸಮಿತಿಯವರೇ ತೆರವುಗೊಳಿಸಬೇಕು.  ಜಿಲ್ಲೆಯಲ್ಲಿ ಮಹನೀಯರ ಪುತ್ಥಳಿ ಇರುವ ಪ್ರಮುಖ ವೃತ್ತಗಳಲ್ಲಿ ಹೂವಿನ ಅಲಂಕಾರಕ್ಕೆ ಮಾತ್ರ ಅವಕಾಶ ನೀಡಬೇಕು, ವೃತ್ತದ ಸ್ಥಳದಲ್ಲಿ ಯಾವುದೇ ಬ್ಯಾನರ್, ಬಂಟಿಂಗ್, ಧ್ವಜಗಳ ಅಳವಡಿಕೆ ಮಾಡುವಂತಿಲ್ಲ, ಈ ಬಗ್ಗೆ ಪೊಲೀಸ್ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿಗಾ ವಹಿಸಬೇಕು.  ಒಟ್ಟಾರೆ ಜಿಲ್ಲೆಯಲ್ಲಿ ಜರುಗುವ ಗಣೇಶ ಚತುರ್ಥಿ ಹಬ್ಬದ ಆಚರಣೆಯು ಕಾನೂನು ಸುವ್ಯವಸ್ಥೆ ಪಾಲನೆಯೊಂದಿಗೆ ಆಗಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಕಾರ್ತಿಕ್, ಪರಿಸರ ಅಧಿಕಾರಿ ಪ್ರಕಾಶ್, ನಗರಸಭೆ ಪೌರಾಯುಕ್ತೆ ರೇಣುಕಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿಹೆಚ್‍ಒ ಡಾ. ರಂಗನಾಥ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಸೇರಿದಂತೆ ವಿವಿಧ ವಿಭಾಗಗಳ ಡಿವೈಎಸ್‍ಪಿ ಗಳು, ಪೊಲೀಸ್ ಅಧಿಕಾರಿಗಳು, ನಾನಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!