ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.14 : ಏಕ ಬಳಕೆ ಪ್ಲಾಸ್ಟಿಕ್ ನಿಷೇಧ, ಕಸ ವಿಲೇವಾರಿ, ಸ್ವಚ್ಚತೆ, ಕನ್ನಡ ನಾಮಫಲಕ ಅಳವಡಿಸುವುದು, ಉದ್ದಿಮೆ ಪರವಾನಗಿ ಪಡೆಯುವುದು ಕುರಿತಂತೆ ಉದ್ದಿಮೆದಾರರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಗರಸಭೆಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ನಗರಸಭೆ ಪೌರಾಯುಕ್ತರಾದ ಎಂ.ರೇಣುಕಾ ಉದ್ದಿಮೆದಾರರನ್ನು ಕುರಿತು ಮಾತನಾಡುತ್ತ ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ. ಪ್ಲಾಸ್ಟಿಕ್ ಬಳಕೆ ಕಮ್ಮಿ ಮಾಡಿ ಬಟ್ಟೆ ಚೀಲಗಳನ್ನು ಬಳಸಿ. ಏಕೆಂದರೆ ಪ್ಲಾಸ್ಟಿಕ್ ಮಣ್ಣಿನಲ್ಲಿ ಕೊಳೆಯವುದಿಲ್ಲ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ. ದಿನನಿತ್ಯವೂ ನಿಮ್ಮ ಮನೆ ಬಾಗಿಲು ಹಾಗೂ ಅಂಗಡಿಗಳ ಬಳಿ ಬರುವ ನಗರಸಭೆ ವಾಹನಗಳಲ್ಲಿ ಕಸ ಹಾಕಿ ಸ್ವಚ್ಚತೆ ಕಾಪಾಡಿ ಎಂದು ಮನವಿ ಮಾಡಿದರು.
ಉದ್ದಿಮೆದಾರರು ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು. ಪರಿಸರ ಇಂಜಿನಿಯರ್ ಜಾಫರ್, ಹೆಲ್ತ್ ಇನ್ಸ್‌ಪೆಕ್ಟರ್ ಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್