Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬೆಂಗಳೂರು ಪೊಲೀಸ್ ಕಮಿಷನರ್ ಅಮಾನತು : ಮಹರ್ಷಿ ವಾಲ್ಮೀಕಿ ನಾಯಕರ ಮಹಾವೇದಿಕೆ ಖಂಡನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 07 : ಹದಿನೆಂಟು ವರ್ಷಗಳ ನಂತರ ಆರ್.ಸಿ.ಬಿ. ಕಪ್ ಗೆದ್ದಿರುವುದಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತಕ್ಕೆ ಹನ್ನೊಂದು ಮಂದಿ ಬಲಿಯಾಗಿರುವುದಕ್ಕೆ ದಕ್ಷ ಮತ್ತು ಪ್ರಾಮಾಣಿಕತೆಗೆ ಹೆಸರಾಗಿರುವ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಇವರನ್ನು ಸೇವೆಯಿಂದ ಅಮಾನತ್ತುಗೊಳಿಸಿರುವುದನ್ನು ಖಂಡಿಸಿ ಮಹರ್ಷಿ ವಾಲ್ಮೀಕಿ ನಾಯಕರ ಮಹಾವೇದಿಕೆಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

 

ನಿರೀಕ್ಷೆಗೂ ಮೀರಿ ಅಭಿಮಾನಿಗಳು ಏಕಾ ಏಕಿ ಸ್ಟೇಡಿಯಂ ಒಳಗೆ ನುಗ್ಗಿದ ಪರಿಣಾಮ ಉಂಟಾದ ಕಾಲ್ತುಳಿತಕ್ಕೂ ಬಿ.ದಯಾನಂದ್‍ರವರ ಅಮಾನತ್ತಿಗೂ ಒಂದಕ್ಕೊಂದು ಸಂಬಂಧವಿಲ್ಲ. ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮ ವಹಿಸದ ಕಾರಣ ಸಾವು ನೋವು ಉಂಟಾಗಿದೆಯೇ ವಿನಃ ಪೊಲೀಸರ ವೈಫಲ್ಯದಿಂದ ಅಲ್ಲ ಎನ್ನುವ ಸಾಮಾನ್ಯ
ಜ್ಞಾನವೂ ಇಲ್ಲದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಮಾನತ್ತು ಆದೇಶವನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ಮಹರ್ಷಿ ವಾಲ್ಮೀಕಿ ನಾಯಕರ ಮಹಾವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಲಕ್ಷ್ಮಿಸಾಗರ, ಸೋಮೇಂದ್ರ ಬಿ.ಟಿ. ಸತ್ಯಪ್ಪ ಮಲ್ಲಾಪುರ, ಚಂದ್ರಪ್ಪ ಘಾಟ್, ವಕೀಲರುಗಳಾದ ಅಶೋಕ್‍ಬೆಳಗಟ್ಟ, ದಾಸಪ್ಪ, ಮಂಜುನಾಥ, ರಾಮಚಂದ್ರಪ್ಪ, ಬಚ್ಚಬೋರನಹಟ್ಟಿ ಈರಬೋರಯ್ಯ ಇವರುಗಳು ಈ ಸಂದರ್ಭದಲ್ಲಿದ್ದರು.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...